Advertisement
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲೇ ಕಾಲಹರಣ ಮಾಡುತ್ತಿದೆ. ಅದನ್ನು ಹೊರತುಪಡಿಸಿ ಬರ ಪರಿಹಾರದಲ್ಲಿ ಯಾವುದೇ ಕ್ರಮವಹಿಸಿಲ್ಲ. ಇನ್ನಾದರೂ ಜಾನುವಾರುಗಳಿಗೆ ಆಹಾರ ಕಿಟ್, ಮೇವು ಬ್ಯಾಂಕ್ ಸ್ಥಾಪಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜಾನುವಾರು ಶಿಬಿರ ನಡೆಸಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಬೇಕು. ಆದರೆ ಇದಕ್ಕೆಲ್ಲ ಜಿಲ್ಲಾಧಿಕಾರಿ ಬಳಿ ಹಣವೇ ಇವಲ್ಲ. ಇದು ಕಾಂಗ್ರೆಸ್‌ನ ನೀತಿ ಆಗಿದೆ ಎಂದು ಕುಟುಕಿದರು.
Related Articles
Advertisement
ಕಾಂಗ್ರೆಸ್ ನಿಮ್ಮ ಪಿಎಂ ಅಭ್ಯರ್ಥಿ ಹೆಸರು ಘೋಷಿಸಿ. ಈ ಚುನಾವಣೆಯಲ್ಲಿ ಅದು ಸ್ಪರ್ಧಿಸಿದ್ದೆ 232 ಸ್ಥಾನಕ್ಕೆ. ಅದು ನಾಯಕತ್ವ ಇಲ್ಲದ, ಕನಸಿನಲ್ಲೇ ತುಪ್ಪ ತಿನ್ನುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದರು.
ಶಹಜಾದೆ ಯುಪಿ ಬಿಟ್ಟು ಕೇರಳಕ್ಕೆ ಹೋಗಿದ್ದರು. ಈಗ ಮತ್ತೆ ರಾಯಬರೇಲಿಗೆ ಹೋಗಿದ್ದಾರೆ. ರಾಹುಲ್ ಗಾಂಧಿ ಟೂರಿಂಗ್ ಟಾಕೀಸ್ ಇದ್ದ ಹಾಗೆ. ಮುಸ್ಲಿಂ ಲೀಗ್‌ನ ಪ್ರಣಾಳಿಕೆ ರೀತಿ ಕಾಂಗ್ರೆಸ್‌ನದ್ದಾಗಿದೆ. ಅದರದು ನಕ್ಸಲ್‌ವಾದದ ಮಾನಸಿಕತೆ ಆಗಿದೆ ಎಂದರು.
ರೈತರ ಸಮಸ್ಯೆಗಳನ್ನು ಬಗೆಹರಿಸಲು ಸ್ವಾಮಿನಾಥನ್ ವರದಿ ಜಾರಿ ಬಿಜೆಪಿಯಿಂದ ಮಾತ್ರ ಸಾಧ್ಯವೆಂದು ಅವರೇ ಟ್ವೀಟ್ ಮಾಡಿದ್ದಾರೆ. ಮತದಾರರು ಮೇ 7ರಂದು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತ ಚಲಾವಣೆ ಮಾಡಬೇಕು ಎಂದರು.