ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಳ್ಳದಮಾದಹಳ್ಳಿ ಗ್ರಾಮದ ರೈತ ತಂದೆ ತಾಯಿಯ ಪುತ್ರ ಪ್ರಮೋದ್ ಆರಾಧ್ಯ ಅವರು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಯಲ್ಲಿ 601 ರ‍್ಯಾಂಕ್ ಗಳಿಸಿದ್ದಾರೆ.
ರೈತರಾದ ರುದ್ರಾರಾಧ್ಯ ಹಾಗೂ ಮಮತಾಮಣಿ ದಂಪತಿಯ ಪುತ್ರ ಪ್ರಮೋದ್ ಆರಾಧ್ಯ ಮೂರನೇ ಪ್ರಯತ್ನದಲ್ಲಿ ನಾಗರಿಕ ಸೇವೆಗಳಿಗೆ ಆಯ್ಕೆಯಾಗಿದ್ದಾರೆ.
ಪ್ರಮೋದ್ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಓದಿದ್ದು ಹೆಗ್ಗಡ ದೇವನಕೋಟೆಯ ಸೇಂಟ್ ಮೇರಿಸ್ ಶಾಲೆಯಲ್ಲಿ. ಮೈಸೂರಿನ ಮರಿಮಲ್ಲಪ್ಪ ಕಾಲೇಜಿನಲ್ಲಿ ಪಿಯುಸಿ ಹಾಗೂ ಮಂಡ್ಯದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದಾರೆ.
ಇದನ್ನೂ ಓದಿ:ಶ್ರೀರಂಗಪಟ್ಟಣ: ದೇಗುಲದ ಬೀಗ ಮುರಿದು ದೇವರ ಆಭರಣ ಕಳ್ಳತನ
2017ರಲ್ಲಿ ವೃತ್ತಿ ಶಿಕ್ಷಣ ಪೂರೈಸಿದ ಪ್ರಮೋದ್ ತಮ್ಮ ಮೂರನೇ ಪ್ರಯತ್ನದಲ್ಲಿ ಯಶಸ್ಸು ಗಳಿಸಿದ್ದಾರೆ.
ಯುಪಿಎಸ್ ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 601 ನೇ ರಾಂಕ್ ಪಡೆಯುವ ಮೂಲಕ ಚಾಮರಾಜನಗರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.