Advertisement

ಬಿಜೆಪಿ ಸೇರ್ಪಡೆಯಾದ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್, ಸಂದೇಶ್ ನಾಗರಾಜ್

05:54 PM May 07, 2022 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಗೆ ವರ್ಷವಷ್ಟೇ ಉಳಿದಿರುವ ಸಮಯದಲ್ಲಿ ರಾಜ್ಯದಲ್ಲಿ ಆಡಳಿತರೂಢ ಬಿಜೆಪಿಯು ಬಲವರ್ಧನೆ ಮಾಡಿಕೊಳ್ಳುತ್ತಿದೆ. ಇದರ ಅಂಗವಾಗಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್ ಸೇರಿ ಪ್ರಮುಖ ನಾಯಕರನ್ನು ಬಿಜೆಪಿ ತನ್ನತ್ತ ಸೆಳೆದುಕೊಂಡಿದೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ವರ್ತೂರು ಪ್ರಕಾಶ್, ಮಾಲೂರು ಮಂಜುನಾಥ್ ಗೌಡ, ಮಂಡ್ಯ ಭಾಗದ ಲಕ್ಷ್ಮೀ ಅಶ್ವಿನ್ ಗೌಡ, ಅಶೋಕ್ ಜಯರಾಮ್, ಮಾಜಿ ಎಂಎಲ್‌ಸಿ ಸಂದೇಶ್ ನಾಗರಾಜ್ ಬಿಜೆಪಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್, ಎಸ್.ಟಿ ಸೋಮಶೇಖರ್, ನಾರಾಯಣಗೌಡ, ಗೋಪಾಲಯ್ಯ, ಮುನಿರತ್ನ, ಸುಧಾಕರ್‌, ಸಂಸದ ಮುನಿಸ್ವಾಮಿ, ಎಂಎಲ್‌ಸಿ ಸಿ.ಪಿ ಯೋಗೇಶ್ವರ್ ಉಪಸ್ಥಿತರಿದ್ದರು.

ಇದನ್ನೂ ಓದಿ:ಪಿಎಸ್ಐ ಅಕ್ರಮದಲ್ಲಿ ಭಾಗಿಯಾದವರ ಹೆಸರನ್ನು ಸಿಎಂ ಹೇಳಬೇಕು: ಡಿಕೆ ಶಿವಕುಮಾರ್

Advertisement

ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಮಲ ಪಕ್ಷ ಸೇರ್ಪಡೆಯಾದರು.

Advertisement

Udayavani is now on Telegram. Click here to join our channel and stay updated with the latest news.

Next