Advertisement

ತಾಯಿ-ಮಕ್ಕಳ ಆಸ್ಪತ್ರೆ ಹಡಿಲು ಬೀಳದಂತೆ ಕ್ರಮವಹಿಸಲಿ : ಪ್ರಮೋದ್‌ ಆಗ್ರಹ

08:45 PM Jun 10, 2021 | Team Udayavani |

ಉಡುಪಿ : ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಡಿಲು ಬೀಳದಂತೆ ಶಾಸಕ ರಘುಪತಿ ಭಟ್‌ ಕ್ರಮವಹಿಸಬೇಕು ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಆಗ್ರಹಿಸಿದ್ದಾರೆ.

Advertisement

ಉಡುಪಿಯಲ್ಲಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾದ್ಯಂತ ಬರುವ ಗರ್ಭಿಣಿ ಮಹಿಳೆಯರು ಮತ್ತು ಪುಟಾಣಿ ಮಕ್ಕಳ ಚಿಕಿತ್ಸೆಗೆ ಹಳೆಯ ಸರಕಾರಿ ಕಟ್ಟಡದ ವ್ಯವಸ್ಥೆಯಲ್ಲಿ ಬದಲಾವಣೆ ಅಗತ್ಯತೆಯನ್ನು ಮತ್ತು ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಬೇಕು ಎನ್ನುವ ಮನವಿಯನ್ನು ತಾನು ಸರಕಾರದ ಮುಂದಿಟ್ಟಾಗ ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಉದ್ಯಮಿ ಡಾ| ಬಿ.ಆರ್‌. ಶೆಟ್ಟಿಯವರು ಮುಂದೆ ಬಂದರು. ಉಡುಪಿಯಲ್ಲಿ ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡು ಆಸ್ಪತ್ರೆ ನಿರ್ಮಿಸಿ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ : ದುಬೈನಿಂದ ಚೆನ್ನೈಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುವಕನ ಬಂಧನ, 1.25ಕೆಜಿ ಚಿನ್ನ ವಶ

ಆಸ್ಪತ್ರೆ ನಿರ್ಮಾಣಗೊಂಡ ಬಳಿಕ ಹತ್ತು ಸಾವಿರಕ್ಕೂ ಹೆಚ್ಚು ಗರ್ಭಿಣಿಯರು ಆಸ್ಪತ್ರೆಯಲ್ಲಿ ಮಕ್ಕಳನ್ನ ಹೆತ್ತಿದ್ದಾರೆ. ಆಸ್ಪತ್ರೆಯವರೇ ಆಹಾರ ಮತ್ತು ಅಗತ್ಯ ವ್ಯವಸ್ಥೆ ಕಲ್ಪಿಸಿದ್ದಾರೆ.

400 ಬೆಡ್‌ ಆಸ್ಪತ್ರೆ ನಿರ್ಮಾಣಕ್ಕೆ ಹಿಂದಿನ ಸರಕಾರ ಅನುಮತಿ ನೀಡಿದ್ದರೂ, ಸರಕಾರ ಬದಲಾದ ಮೇಲೆ ಶಾಸಕ ಭಟ್‌ ಆಸ್ಪತ್ರೆ ನಿರ್ಮಾಣಕ್ಕೆ ತಡೆಯೊಡ್ಡುತ್ತಾ ಬಂದಿರುವುದರಿಂದ ವ್ಯವಸ್ಥಿತವಾಗಿ ನಡೆಯುತ್ತಿದ್ದ ಸುಸಜ್ಜಿತ ಆಸ್ಪತ್ರೆ ಇಂದು ಅವ್ಯವಸ್ಥೆಯತ್ತ ಮುಖಮಾಡುತ್ತಿದೆ. 400 ಬೆಡ್‌ ಆಸ್ಪತ್ರೆ ನಿರ್ಮಾಣವಾಗಿರುತ್ತಿದ್ದಲ್ಲಿ ಕೋವಿಡ್‌ ನಿರ್ವಹಣೆಯಲ್ಲೂ ಉಡುಪಿ ಜಿಲ್ಲೆಗೆ ಹೆಚ್ಚಿನ ಸಹಕಾರವಾಗುತ್ತಿದ್ದಿರಬಹುದು ಮತ್ತು 200 ಬೆಡ್‌ ಗಳ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಯನ್ನು ಅವರೇ ನೋಡಿಕೊಳ್ಳುತ್ತಿದ್ದರು.

Advertisement

ಆಸ್ಪತ್ರೆಯಲ್ಲಿ ಗೊಂದಲಗಳು ಉಂಟಾಗಿ ಕೆಲಸ ಮಾಡುತ್ತಿರುವ ಆರೋಗ್ಯ ಸಿಬಂದಿಗಳಿಗೆ ಮತ್ತು ಇತರ ನೌಕರರಿಗೆ ಹಲವು ತಿಂಗಳಿನಿಂದ ವೇತನವಿಲ್ಲದೆ ಇತ್ತ ಸೇವಾ ಭದ್ರತೆಯೂ ಇಲ್ಲದೆ ಮಾನಸಿಕವಾಗಿ ಕಿರುಕುಳ ಅನುಭವಿಸುತ್ತಿದ್ದಾರೆ. ಮುಷ್ಕರದ ಕಾರಣದಿಂದಾಗಿ ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಡುವಂತಾಗಿದೆ. ರಘುಪತಿ ಭಟ್‌ ಅವರಿಂದ ಪ್ರಾರಂಭವಾದ ಈ ಸಮಸ್ಯೆಯನ್ನು ಅವರೇ ಪರಿಹರಿಸಲಿ ಎಂದು ಪ್ರಮೋದ್‌ ಆಗ್ರಹಿಸಿದರು.

ಇದನ್ನೂ ಓದಿ : ಕೋವಿಡ್ 19 : ಲಾಕ್ ಡೌನ್ ನಿರ್ಬಂಧಗಳಲ್ಲಿ ಮಾರ್ಪಾಡು ಮಾಡಿ ಬಿಎಸ್ ವೈ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next