Advertisement

ಬೆಳಗಾವಿ ಉಪ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೇಟ್ ಆಕಾಂಕ್ಷಿ : ಮುತಾಲಿಕ್

10:02 PM Feb 27, 2021 | Team Udayavani |

ವಿಜಯಪುರ : ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಉಪ ಚುನಾವಣೆ ಎದುರಾಗಲಿದೆ. ಸದರಿ ಕ್ಷೇತ್ರದಲ್ಲಿ ನಾನು ಬಿಜೆಪಿ ಟಿಕೆಟ್ ಸಹಿತ ಪ್ರಬಲ ಸ್ಪರ್ಧಾಕಾಂಕ್ಷಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ.

Advertisement

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇನೆ. ಕ್ಷೇತ್ರದಲ್ಲಿ ಪ್ರಸಕ್ತ ಲೋಕಸಭೆಯಲ್ಲಿ ಬಾಕಿ ಇರುವ 3 ವರ್ಷ ಅತ್ಯುತ್ತಮ ಜನಸೇವೆ ಮಾಡುವ ಇರಾದೆ ಹೊಂದಿದ್ದೇನೆ.

ಬಿಜೆಪಿ ಹೈಕಮಾಂಡ್ ನನಗೆ ಅವಕಾಶ ಕಲ್ಪಿಸಿ ಕೊಡಬೇಕು. ಟಿಕೆಟ್ ನೀಡದಿದ್ದರೂ ನಾನು ಬಿಜೆಪಿ ಅಧಿಕೃತ ಅಭ್ಯರ್ಥಿ ಪರ ಪ್ರಚಾರ ನಡೆಸಿ ಗೆಲುವಿಗೆ ಶ್ರಮಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ದೊಡ್ಡವಳ ಜೀವ ಉಳಿಸಲು10,000ರೂ.ಗೆ ಚಿಕ್ಕವಳ ಮಾರಾಟ : ಅಪ್ರಾಪ್ರೆ ಖರೀದಿಸಿ ಮದುವೆಯಾದ ಕೀಚಕ

Advertisement

Udayavani is now on Telegram. Click here to join our channel and stay updated with the latest news.

Next