Advertisement
ರವಿವಾರ ಶ್ರೀರಾಮಸೇನೆ ಕಾರ್ಯಕರ್ತರ ಬೈಠಕ್‌ನಲ್ಲಿ ಉಪಾಧ್ಯಕ್ಷ ಮಹೇಶ್ ಕುಮಾರ್ ಕೆ. ಮಾತನಾಡಿ, ಮುತಾಲಿಕ್ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆಂದು ಹೇಳಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಅಲ್ಲಿನ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಮುತಾಲಿಕ್ ಅವರಿಗೆ ಸುಳ್ಳು ಭರವಸೆ ನೀಡಿ ದಾರಿ ತಪ್ಪಿಸಿದ್ದಾರೆ ಎಂದರು.
ಶ್ರೀರಾಮ ಸೇನೆ ಮುಖಂಡ ಮೋಹನ್ ಭಟ್ ಮಾತನಾಡಿ, ಮುತಾಲಿಕ್ ತಮ್ಮ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಂಡರೆ ಉತ್ತಮ. ಮುಂಚೆಯೇ ನಾವು ಮುತಾಲಿಕ್ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಸಿ.ಟಿ. ರವಿ ಮತ್ತು ಸಂಘ ಪರಿವಾರದ ಮುಖಂಡರ ಜತೆಗೆ ಮಾತುಕತೆ ನಡೆಸಿದಾಗ ಜಮಖಂಡಿ ಕ್ಷೇತ್ರದಲ್ಲಿ ಟಿಕೆಟ್ ನೀಡುವ ಬಗ್ಗೆ ಭರವಸೆ ನೀಡಿದ್ದರು ಎಂದರು. ಚಂದ್ರಕಾಂತ್ ಶೆಟ್ಟಿ, ಸಂದೀಪ್ ಮೂಡುಬೆಟ್ಟು, ಕೀರ್ತಿರಾಜ್, ಶ್ರೀನಿವಾಸ್ ರಾವ್, ಶಾರದಮ್ಮ, ಪ್ರಶಾಂತ್ ಬಂಗೇರ ಉಪಸ್ಥಿತರಿದ್ದರು.