Advertisement

ಹುಬ್ಬಳ್ಳಿ ಸ್ಫೋಟ ಪ್ರಕರಣದಲ್ಲಿ ಉಗ್ರ ಸಂಘಟನೆಗಳ ಕೈವಾಡ

10:01 AM Oct 24, 2019 | sudhir |

ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗಂಭೀರವಾಗಿ ಪರಿಗಣಿಸಬೇಕು. ಇದರ ಹಿಂದೆ ಬಹುದೊಡ್ಡ ಷಡ್ಯಂತ್ರ ಅಡಗಿದೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ನಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ತೀರ್ಪು ಹೊರಬೀಳುವ ಸಂದರ್ಭದಲ್ಲಿ ದೇಶದಲ್ಲಿ ಬಹುದೊಡ್ಡ ಗಲಭೆ ಸೃಷ್ಟಿಯಾಗಿವೆ ಎಂಬುದನ್ನು ಸರಕಾರಗಳು ಅರಿಯಬೇಕು.

ಇಂತಹ ಸ್ಫೋಟ ಪ್ರಕರಣಗಳ ಹಿಂದೆ ಅನೇಕ ಉಗ್ರ ಸಂಘಟನೆಗಳು, ಐಎಸ್ ಐ, ಪಾಕಿಸ್ತಾನ, ಅಫ್ಘಾನಿಸ್ತಾನ ಕೈವಾಡದ ಶಂಕೆ ಇದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದರು.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಗುರವಾಗಿ ಪರಿಗಣಿಸಿದಂತಿದೆ.ಘಟನೆ ಸಂಭವಿಸಿ ಮೂರು ದಿನವಾದರೂ ಘಟನೆ ಕುರಿತು ಸ್ಪಷ್ಟತೆ ಇಲ್ಲವಾಗಿದೆ.

ಉತ್ತರ ಪ್ರದೇಶದಲ್ಲಿ ಹಿಂದೂ ಮುಖಂಡರೊಬ್ಬರ ಹತ್ಯೆ ಪ್ರಕರಣದಲ್ಲಿ ಹುಬ್ಬಳ್ಳಿಯ ವ್ಯಕ್ತಿಯೊಬ್ಬರ ಬಂಧನ, ಇಲ್ಲಿ ಭಯೋತ್ಪಾದನೆ ನಂಟುಗಳು ಇನ್ನು ಸಕ್ರಿಯವಾಗಿವೆ ಎಂಬದಕ್ಕೆ ಸಾಕ್ಷಿಯಾಗಿದೆ ಎಂದರು.

Advertisement

ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಬೆಳಗಾವಿ ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ಅಕ್ರಮ ಬಾಂಗ್ಲಾದೇಶ ವಾಸಿಗಳು ಸಂಖ್ಯೆ ಹೆಚ್ಚಿದ್ದು ರಾಜ್ಯ ಸರಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಶ್ರೀ ರಾಮಸೇನೆ ಅವರನ್ನು ಒದ್ದೋಡೆಸುವ ಕಾರ್ಯಕ್ಕೆ ಮುಂದಾಗಲಿದೆ ಎಂದರು.
ನ್ಯಾ. ಜಗನ್ನಾಥ ಶೆಟ್ಟಿ ಆಯೋಗದ ವರದಿ ಬಹಿರಂಗ ಪಡಿಸದಿರುವುದು ನೋವಿನ ಸಂಗತಿ.

ವೀರಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದನ್ನು ಸ್ವಾಗತಿಸುತ್ತೇವೆ. ಇತಿಹಾಸ ತಿಳಿಯದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನವರು ವಿರೋಧಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣೆ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಕ್ಕೆ ನಮ್ಮ ಆಕ್ಷೇಪ ಇದೆ ಎಂದರು.

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರಕಾರ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ರಾಜ್ಯದಲ್ಲಿ ತಮ್ಮದೇ ಶ್ರಮ ಹಾಕಿದ ಚಕ್ರವರ್ತಿ ಸೂಲಿಬೆಲೆ ಅವರಿಗೆ ದೇಶದ್ರೋಹಿ ಎಂದಿರುವುದು ಸರಿಯಲ್ಲ. ರಾಜ್ಯದ ಬಿಜೆಪಿಯವರು ನನ್ನಂತೆಯೆ ಸೂಲಿಬೆಲೆ ಅವರನ್ನು ಬಳಸಿಕೊಂಡು ಇದೀಗ ಕೈ ಬಿಟ್ಟಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next