Advertisement

ನವಭಾರತ ನಿರ್ಮಿಸಲು ರಾಷ್ಟ್ರೀಯ ಶಿಕ್ಷಣ ನೀತಿಯ ಅಗತ್ಯವಿದೆ : ಪ್ರಮೋದ ಸಾವಂತ್

04:15 PM Jul 12, 2022 | Team Udayavani |

ಪಣಜಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ನೀತಿಯಾದ ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅನುಷ್ಠಾನ ಈ ವರ್ಷದಿಂದ ಆರಂಭವಾಗಲಿದ್ದು, ಇದರಿಂದ ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ರೋಬೊಟಿಕ್ ಕೋಡಿಂಗ್ ಜೊತೆಗೆ ಶಿಕ್ಷಕರಿಗೆ ತರಬೇತಿ ನೀಡಲು ಅನುಕೂಲವಾಗಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದರು.

Advertisement

ಗೋವಾ ವಿಧಾನಸಭೆ ಕಲಾಪದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ವೆಂಜಿ ವಿಯೆಗಾಸ್ ರವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಾವಂತ್- ಶಿಕ್ಷಣ ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ವಿದ್ಯಾ ಸಮೀಕ್ಷಾ ಕೇಂದ್ರವನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು. ಹೊಸ ಪಠ್ಯಕ್ರಮ ಮತ್ತು ಶಿಕ್ಷಕರ ತರಬೇತಿಯನ್ನು ಆರಂಭಿಸಲಾಗುವುದು. ಪ್ರಧಾನಿಯವರ ಕರೆಯಂತೆ ನವಭಾರತ ರಚಿಸಲು ಈ ಶೈಕ್ಷಣಿಕ ನೀತಿಯ ಅಗತ್ಯವಿದೆ. ಪ್ರಸಕ್ತ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.

ಇದನ್ನೂ ಓದಿ : ಸಾಗರ: ಭಾರಿ ಮಳೆಗೆ ಬೀಸನಗದ್ದೆ ಗ್ರಾಮ ಸಂಪೂರ್ಣ ಜಲಾವೃತ : ಜನ ಸಂಚಾರಕ್ಕೆ ದೋಣಿ ವ್ಯವಸ್ಥೆ

Advertisement

Udayavani is now on Telegram. Click here to join our channel and stay updated with the latest news.

Next