Advertisement

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಕೋವಿಡ್ ಸೋಂಕು ದೃಢ

03:26 PM Sep 02, 2020 | keerthan |

ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಪ್ರಮೋದ್ ಸಾವಂತ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಖಚಿತ ಪಡಿಸಿದ್ದಾರೆ.

Advertisement

ನನಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಇಲ್ಲದೇ ಇರುವ ಕಾರಣ ಮನೆಯಲ್ಲಿಯೇ ಇಸೊಲೇಶನ್ ನಲ್ಲಿ ಇರುತ್ತೇನೆ. ಮನೆಯಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೈಕ್ ಪಾರ್ಕ್ ನೆಪದಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಗೋವಾ ರಾಜ್ಯದಲ್ಲಿ ಇದುವರೆಗೆ 17,418 ಕೋವಿಡ್ ಪ್ರಕರಣಗಳು ದೃಢವಾಗಿದೆ. ಇದುವರೆಗೆ 192 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 13,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದನ್ನೂ ಓದಿ:  8 ಗಂಟೆಗಳ ಕಾಲ 25 ಕಿಲೋ ಮೀಟರ್ ದೂರ… ಶವ ಹೊತ್ತೊಯ್ದು ತಲುಪಿಸಿದ ಐಟಿಬಿಪಿ ಯೋಧರು

Advertisement

ದೇಶದ ಸೋಂಕಿತರ ಸಂಖ್ಯೆ 3.77 ಮಿಲಿಯನ್ ದಾಟಿದೆ. ಸಾವಿನ ಸಂಖ್ಯೆ 66,333ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next