Advertisement

“ಪ್ರಮೋದ್‌ ಸ್ಪರ್ಧೆಯಿಂದ ಮಹಾ ಘಟಬಂಧನ್‌ಗೆ ಬಲ’

10:09 PM Mar 29, 2019 | Team Udayavani |

ಕಾಪು : ಕಾಂಗ್ರೆಸ್‌ – ಜೆಡಿಎಸ್‌ ಜಂಟಿ ಪಕ್ಷಗಳ ಕಾರ್ಯಕರ್ತರ ಸಭೆ
ಕಾಪು, ಮಾ. 29: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಸ್ಪರ್ಧಿಸುವ ಮೂಲಕ ರಾಷ್ಟÅ ರಾಜಕಾರಣದ ಮಹಾ ಘಟಬಂಧನ್‌ಗೆ ವಿಶೇಷ ಬಲ ತುಂಬಿದಂತಾಗಿದೆ. ದೇಶದ ಸಂವಿಧಾನ, ಜಾತ್ಯತೀತತೆಯ ರಕ್ಷಣೆಗಾಗಿ ಗೆಲುವಿಗೆ ಪ್ರಮೋದ್‌ ಅವರ ಗೆಲುವು ಅನಿವಾರ್ಯವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಹೇಳಿದರು.

Advertisement

ಕಾಪು ಜೇಸಿ ಭವನದಲ್ಲಿ ಗುರುವಾರ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಕಾರ್ಯಕರ್ತರ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಸರಕಾರದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಮಾತನಾಡಿ, ಕಾಪು ಕ್ಷೇತ್ರದಲ್ಲಿ ಪುರಸಭೆಯೊಂದನ್ನು ಹೊರತುಪಡಿಸಿದರೆ ಹೆಚ್ಚಿನ ಆಯಕಟ್ಟಿನ ಸ್ಥಾನಗಳಲ್ಲಿ ಬಿಜೆಪಿ ಜನಪ್ರತಿನಿಧಿಗಳೇ ಆಡಳಿತದಲ್ಲಿ ದ್ದಾರೆ. ಕಾರ್ಯಕರ್ತರ ಎಲ್ಲ ನೋವಿಗೂ ಪೂರಕವಾಗಿ ಸ್ಪಂದಿಸಿ, ಕಾರ್ಯಕರ್ತರ ಪರವಾಗಿ ಧ್ವನಿ ಎತ್ತುವ ಉದ್ದೇಶಕ್ಕಾಗಿ ಸ್ಪರ್ಧಿಸುತ್ತಿದ್ದೇನೆ.

ಎಲ್ಲರೂ ಮುಕ್ತ ಮನಸ್ಸಿನಿಂದ ಬೆಂಬಲಿಸುವಂತೆ ವಿನಂತಿಸಿ ಕೊಂಡರು.
ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಂ.ಎ. ಗಫೂರ್‌, ಕೆಪಿಸಿಸಿ ವೀಕ್ಷಕ ಕಳ್ಳಿಗೆ ತಾರಾನಾಥ ಶೆಟ್ಟಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಬಾಲಾಜಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಕೆ.ಪಿ.ಸಿ.ಸಿ. ಕಾರ್ಯದರ್ಶಿ ಗಳಾದ ಡಾ| ದೇವಿಪ್ರಸಾದ್‌ ಶೆಟ್ಟಿ, ರಾಜಶೇಖರ ಕೋಟ್ಯಾನ್‌, ಕೆಪಿಸಿಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ, ಕಾಪು ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಜೆಡಿಎಸ್‌ ಬ್ಲಾಕ್‌ ಅಧ್ಯಕ್ಷ ಸುಧಾಕರ ಹೆಜಮಾಡಿ, ಮೈತ್ರಿ ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಕಾಪು ದಿವಾಕರ ಶೆಟ್ಟಿ, ದಿಲ್ಲೇಶ್‌ ಶೆಟ್ಟಿ, ಶಾಲಿನಿ ಶೆಟ್ಟಿ ಕೆಂಚನೂರು, ಪ್ರಭಾವತಿ ಶೆಟ್ಟಿ ಕಟಪಾಡಿ, ಶಿವಾಜಿ ಸುವರ್ಣ ಬೆಳ್ಳೆ, ದಿನೇಶ್‌ ಪುತ್ರನ್‌, ಮನ್ಸೂರ್‌ ಇಬ್ರಾಹಿಂ, ಅಬ್ದುಲ್‌ ಅಜೀಜ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

ಕಾಪು ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಸ್ವಾಗತಿಸಿದರು. ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ ವಂದಿಸಿದರು. ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಅಮೀರ್‌ ಕಾಪು ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next