Advertisement

1ರಿಂದ 8ರವರೆಗೆ ಎಲ್ಲಾ ಮಕ್ಕಳು ಪರೀಕ್ಷೆ ಇಲ್ಲದೆ ಪಾಸ್: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

09:07 AM Apr 03, 2020 | keerthan |

ಬೆಂಗಳೂರು: ಕೋವಿಡ್-19 ಕಾರಣದಿಂದ ಒಂದನೇ ತರಗತಿಯಿಂದ 8ನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ಧಾರೆ.

Advertisement

ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಸಚಿವರು, ಈ ಹಿಂದೆ ಒಂದರಿಂದ ಆರನೇ ತರಗತಿಯವರೆಗೆ ಮಕ್ಕಳನ್ನು ಪಾಸ್ ಮಾಡಲು ಸೂಚಿಸಲಾಗಿತ್ತು. ಆದರೆ ಈಗ ಏಳು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳನ್ನು ಕೂಡಾ ಯಾವುದೇ ಪರೀಕ್ಷೆ ನಡೆಸದೇ ಮುಂದಿನ ತರಗತಿಗೆ ಉತ್ತೀರ್ಣ ಮಾಡಲಾಗುವುದು ಎಂದು ಸ್ಪಷ್ಟ ಪಡಿಸಿದರು.

ಈ ವರ್ಷ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸಲು ಇಚ್ಛಿಸಲಾಗಿತ್ತು. ಆದರೆ ಈ ಕೋವಿಡ್-19 ಕಳವಳದ ಸಂದರ್ಭದಲ್ಲಿ ಇದು ನಡೆಸಲು ಸಾಧ್ಯವಿಲ್ಲ. ಆ ಕಾರಣದಿಂದ ಎಂಟನೇ ತರಗತಿ ಆರಂಭವಾದ ಪ್ರಾರಂಭದಲ್ಲಿ ಮೌಲ್ಯಾಂಕನ ನಡೆಸಲಾಗುವುದು ಎಂದರು.

ಇನ್ನು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿದ್ಯಾರ್ಥಿಗಳಿಗೆ ಫಾರ್ಮೇಟೀವ್ (ರೂಪಣಾತ್ಮಕ), ಸಮ್ಮೇಟೀವ್( ಸಂಕಲನಾತ್ಮಕ) ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರ  ಆಧಾರದ ಮೇಲೆ 10ನೇ ತರಗತಿಗೆ ಪಾಸ್ ಮಾಡಲಾಗುತ್ತದೆ. ಈ ಎರಡು ಆಂತರಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇರುವ ವಿದ್ಯಾರ್ಥಿಗಳಿಗೆ ರಜಾ ಅವಧಿಯಲ್ಲಿ ಶಾಲೆಗಳು ಸೂಕ್ತ ಮಾರ್ಗದರ್ಶನ ನೀಡಿ, ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೂಕ್ತ ಪರೀಕ್ಷೆ ನಡೆಸಿ ಉತ್ತೀರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂದ ಏ.14ರ ನಂತರ ಪರಿಸ್ಥಿತಿ ಅವಲೋಕಿಸಿ, ಮಕ್ಕಳಿಗೆ ಸಮಯಾವಕಾಶ ನೀಡಿ ಪರಿಷ್ಕೃತ ವೇಳಾ ಪಟ್ಟಿ ಪ್ರಕಟಿಸಲಿದ್ದೇವೆ. ದ್ವಿತೀಯ ಪಿಯುಸಿ ಇಂಗ್ಲಿಷ ಪರೀಕ್ಷೆಯ ದಿನಾಂಕವನ್ನು ಏ.14ರ ನಂತರ ತೀರ್ಮಾನಿಸಲಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next