ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಪುತ್ರ ಮಾಜಿ ಮಾಜಿ ಕಾಂಗ್ರೆಸ್ ಸಂಸದ ಅಭಿಜಿತ್ ಮುಖರ್ಜಿ ತಿಳಿಸಿದ್ದಾರೆ.
ಶನಿವಾರ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದು, ನಿಮ್ಮೆಲ್ಲರ ಆಶಿರ್ವಾದದಿಂದ ಮತ್ತು ದೇವರ ದಯೆಯಿಂದ ಆರೋಗ್ಯದಲ್ಲಿ ಸ್ಥಿರತೆ ಕಂಡುಬರುತ್ತಿದೆ. ಮಾತ್ರವಲ್ಲದೆ ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಅವರು ಶೀಘ್ರವಾಗಿ ಆರೋಗ್ಯವಂತರಾಗಿ ಮರಳುತ್ತಾರೆ ಎಂದು ಅಭಿಶೇಕ್ ಮುಖರ್ಜಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಆದರೇ ಆರ್ಮಿ ಆಸ್ಪತ್ರೆ, ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಹಿಂದಿನಂತೆಯೇ ಇದ್ದು ಯಾವುದೇ ಬದಲಾವಣೆ ಇಲ್ಲ., ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದು ಪ್ರಕಟನೆ ಹೊರಡಿಸಿದೆ.
ಪ್ರಣಬ್ ಮುಖರ್ಜಿ ಅವರ ಪುತ್ರಿ ಶನಿವಾರ ಭಾವನಾತ್ಮಕ ಸಂದೇಶವೊಂದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು, ತನ್ನ ತಂದೆಯೊಂದಿಗೆ, ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ನೆನಪಿಸಿಕೊಂಡಿದ್ದಾರೆ. ಸ್ವಾತಂತ್ರ್ಯ ದಿನದಂದು ತನ್ನ ತಂದೆ ಪ್ರತಿವರ್ಷ ಧ್ವಜಾರೋಹಣ ಮಾಡುತ್ತಿದ್ದರು. ಮುಂದಿನ ವರ್ಷವೂ ತ್ರಿವರ್ಣ ಧ್ವಜ ಹಾರಿಸುವ ಅವಕಾಶ ಒದಗಿಬರಲಿ ಎಂದು ಆಶಿಸುತ್ತೇನೆ.
ಬಾಲ್ಯದಲ್ಲಿ ತನ್ನ ತಂದೆ ಗ್ರಾಮದಲ್ಲಿ ಧ್ವಜಾರೋಹಣ ಮಾಡುತ್ತಿದ್ದದ್ದು ನೆನಪಿದೆ. ಅಲ್ಲಿಂದ ಇಲ್ಲಿಯವರೆಗೂ ಅವರ ಧ್ವಜಾರೋಹಣ ಮಾಡುತ್ತಿದ್ದ ಪ್ರತಿಯೊಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೆ ಎಂದು ಬರೆದುಕೊಂಡಿದ್ದಾರೆ.