Advertisement
ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸಪ್ರಸಾದ್ ಅವರ ನಿವಾಸಕ್ಕೆ ಗುರುವಾರ ಆಗಮಿಸಿದ ಚಾಮರಾಜ ನಗರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಆರ್.ಧ್ರುವನಾರಾಯಣ ವಿರುದ್ಧ ಸ್ಪರ್ಧೆ ಮಾಡುವಂತೆ ಒತ್ತಡ ಹೇರಿದರು. ಆದರೆ, ನಂಜನಗೂಡು ಉಪ ಚುನಾವಣೆ ಸಂದರ್ಭದಲ್ಲೇ ನಾನು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಸಕ್ರಿಯ ರಾಜಕಾರಣದಲ್ಲಿದ್ದು ಕಿರಿಯರಿಗೆ ಮಾರ್ಗದರ್ಶನ ಮಾಡುತ್ತೇನೆ.
Related Articles
Advertisement
ಒತ್ತಡ ಹೇರಿ, ಜೈಕಾರ: ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಹಾಗೂ ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದ ಸದಸ್ಯರು, ಪ್ರಸಾದ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲೇಬೇಕು ಎಂದು ಒತ್ತಡ ಹೇರಿ, ಜೈಕಾರ ಮೊಳಗಿಸಿದರು.
ಇಂದು ಬಿಎಸ್‌ವೈ ಜೊತ ಚರ್ಚೆ: ಕಾರ್ಯಕರ್ತರು ಮತ್ತು ಮುಖಂಡರ ಒತ್ತಡಕ್ಕೆ ಮಣಿದ ಶ್ರೀನಿವಾಸಪ್ರಸಾದ್ ಅವರು ಶುಕ್ರವಾರ ತಮ್ಮ ನಿರ್ಧಾರ ತಿಳಿಸುವುದಾಗಿ ಹೇಳಿ ಬೆಂಗಳೂರಿಗೆ ತೆರಳಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಶುಕ್ರವಾರ ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಚಾಮರಾಜ ನಗರ ಜಿಪಂ ಸದಸ್ಯ ಕಮಲ್, ಎಸ್.ಸಿ ಮೋರ್ಚಾ ಅಧ್ಯಕ್ಷ ಮಹಾದೇವ ಸ್ವಾಮಿ, ಶ್ರೀಧರ ಮೂರ್ತಿ, ನಂಜನಗೂಡು ತಾಪಂ ಸದಸ್ಯ ಬಿ.ಎಸ್.ರಾಮು ಸೇರಿದಂತೆ ಹಲವರು ಹಾಜರಿದ್ದರು.
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಮನಸ್ಥಿತಿಯಲ್ಲಿಲ್ಲ. ಆದರೆ, ನನ್ನ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಒತ್ತಡ ಹೆಚ್ಚಾಗಿದೆ. ಅವರ ಮನವಿಯನ್ನು ಪುರಸ್ಕರಿಸಬೇಕೋ, ತಿರಸ್ಕರಿಸಬೇಕೋ ಎಂಬುದು ತಿಳಿಯುತ್ತಿಲ್ಲ. ಬಿಜೆಪಿಯ ಹೈಕಮಾಂಡ್ ಕೂಡ ನನಗೆ ಟಿಕೆಟ್ ನೀಡಲು ಮುಂದಾಗಿದೆ. ಈ ಬಗ್ಗೆ ಶೀಘ್ರದಲ್ಲೇ ನಿರ್ಣಯ ಕೈಗೊಳ್ಳುತ್ತೇನೆ.-ವಿ.ಶ್ರೀನಿವಾಸಪ್ರಸಾದ, ಮಾಜಿ ಸಚಿವ