ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಇಂದು ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು.
ರಾಜಭವನದ ಗಾಜಿನಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು, ಕುಟುಂಬ ವರ್ಗದವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಇದನ್ನೂ ಓದಿ:ರೋಹಿತ್ ಅಭಿಮಾನಿಯನ್ನು ಹತ್ಯೆಗೈದ ವಿರಾಟ್ ಕೊಹ್ಲಿ ಫ್ಯಾನ್: ಏನಿದು ‘ಫ್ಯಾನ್ಸ್ ವಾರ್’?
ಸಮಾರಂಭದ ಸ್ವಾಗತವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನೆರವೇರಿಸಿದರು.