Advertisement

ಇನ್ನೊಂದು ವರ್ಷ ರಾಜಕೀಯದಿಂದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ದೂರ  

11:19 AM Sep 03, 2021 | Team Udayavani |

ನವ ದೆಹಲಿ : ಬರುವ ವರ್ಷದಲ್ಲಿ ಬರುವ ಪಂಚರಾಜ್ಯ ಚುನಾವಣೆಯಿಂದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ದೂರವಿರಲಿದ್ದು, ಯಾವುದೇ ರಾಜಕೀಯ ಪಕ್ಷದೊಂದಿಗೆ ಆತಂತರಿಕವಾಗಿ ಅಥವಾ ಬಹಿರಂಗವಾಗಿ ಕೆಲಸ ಮಾಡುವುದಿಲ್ಲವೆಂದು ಅವರ ಆಪ್ತ ವಲಯ ಹೇಳಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Advertisement

ಈ ಬಗ್ಗೆ ಪ್ರತಿಕ್ರಿಯಿಸಿದ ಕಿಶೋರ್ ಆಪ್ತ ವಲಯದ, ರಾಜಕೀಯದಿಂದ ವಿರಾಮ ತೆಗೆದುಕೊಳ್ಳಲಿದ್ದು, ಬರುವ ಮಾರ್ಚ್ ತನಕ ಯಾವುದೇ ಪಕ್ಷದೊಂದಿಗೆ ಕಾರ್ಯ ನಿರ್ವಹಿಸುವುದಿಲ್ಲವೆಂದು ಹೇಳಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯಾ ಟುಡೆ ವರದಿ ಮಾಡಿದೆ.

ಇದನ್ನೂ ಓದಿ : ವಿಕ್ರಾಂತ್‌ ರೋಣ ನಿರೀಕ್ಷೆ ದುಪ್ಪಟ್ಟು: ಪ್ಯಾನ್‌ ಇಂಡಿಯಾ ರೋಣ ಸೌಂಡ್‌ ಜೋರು

ಈ ಹಿಂದೆಯೇ ಪ್ರಶಾಂತ್ ಕಿಶೋರ್ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಹೇಳಿದ್ದರು. ಆದಾಗ್ಯೂ ರಾಜಕೀಯದಿಂದ ಹೊರತಾಗಿ ಏನು ಮಾಡುತ್ತಾರೆ ಎನ್ನುವುದು ಇನ್ನೂ ಯಕ್ಷ ಪ್ರಶ್ನೆಯಾಗಿ ಉಳಿದಿದೆ ಎಂದು ವರದಿಯಾಗಿದೆ. ಇದು, ಬರುವ ವರ್ಷದಲ್ಲಿ ಬರಲಿರುವ ಉತ್ತರ ಪ್ರದೇಶವನ್ನು ಒಳಗೊಂಡು ಐದು ರಾಜ್ಯಗಳಲ್ಲಿ ನಡೆಯುವ ವಿಧಾನ ಸಭಾ ಚುನಾವಣೆಯಿಂದ ಹೊರಗುಳಿಯಲಿದ್ದಾರೆ ಎಂದು ಈ ವರದಿ ಪರೋಕ್ಷವಾಗಿ ತಿಳಿಸುತ್ತದೆ.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮಗತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೇಸ್ ಪಕ್ಷ ಬಿಜೆಪಿ ವಿರುದ್ಧ ಭರ್ಜರಿ ಜಯ ಗಳಿಸಿದ ನಂತರ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ರಾಜಕೀಯದೊಂದಿಗಿನ ವೃತ್ತಿಗೆ ನಿವೃತ್ತಿ ಘೋಷಿಸಿದ್ದರು.  ಆ ಸಂದರ್ಭದಲ್ಲಿ ‘ನಾನು ಬಹಳ ಹಿಂದಿನಿಂದಲೂ ರಾಜಕೀಯದಿಂದ ನಿವೃತ್ತಿ ಹೊಂದಬೇಕೆಂದಿದ್ದೆ ಪಶ್ಚಿಮ ಬಂಗಾಳದ ಚುನಾವಣೆ ನನಗೆ ಅವಕಾಶ ಮಾಡಿ ಕೊಟ್ಟಿದೆ’ ಎಂದು ಪ್ರಶಾಂತ್ ಹೇಳಿದ್ದರು.

Advertisement

ಇನ್ನು, ಬರುವ ಪಂಚರಾಜ್ಯ ಚುನಾವಣೆಯಲ್ಲಿಯೇ ಹೈ ವೋಲ್ಟೆಜ್ ವಿಧಾನ ಸಭಾ ಚುನಾವಣೆ ಎಂದು ಕರೆಸಿಕೊಳ್ಳುತ್ತಿರುವ ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವುದಕ್ಕೆ ಪ್ರಯತ್ನಿಸುತ್ತಿದ್ದು, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಉತ್ತರ ಪ್ರದೇಶದ ಗದ್ದುಗೆ ಏರುವ ಪ್ರಯತ್ನದಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಸಾಧಿಸಿಕೊಳ್ಳುತ್ತಿದ್ದು, ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕೂಡ ಅಧಿಕಾರಕ್ಕೇರಲು ಸಮರೋಪಾದಿಯಲ್ಲಿ ಪ್ರಯತ್ನಿಸುತ್ತಿದೆ.

ಕಳೆದ ಒಂದೆರಡು ತಿಂಗಳುಗಳ ಹಿಂದೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಪ್ರಶಾಂತ್ ಕಿಶೋರ್ ಮಾತುಕತೆ ನಡೆಸಿದ್ದರು, ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಗಾಂಧಿ ಪಕ್ಷದ ಹಿರಿಯ ನಾಯಕರೊಂದಿಗೆ ಮಾತನಾಡಿದ್ದರು ಎಂದು ವರದಿಯಾಗಿತ್ತು.

ಇದನ್ನೂ ಓದಿ : ಸಾರ್ವಕಾಲಿಕ ಗರಿಷ್ಠ ದಾಖಲೆ; 58 ಸಾವಿರ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್

Advertisement

Udayavani is now on Telegram. Click here to join our channel and stay updated with the latest news.

Next