ಪಾಟ್ನಾ: ಖ್ಯಾತ ಚುನಾವಣಾ ಕಾರ್ಯತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಭಾನುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಮ್ಮುಖದಲ್ಲಿ ಜೆಡಿಯು ಸೇರ್ಪಡೆಯಾಗಿದ್ದಾರೆ.
ಜೆಡಿಯು ಕಾರ್ಯಕಾರಿಣಿ ಸಭೆ ನಡೆಯುವ ಮುನ್ನ ಪ್ರಶಾಂತ್ ಕಿಶೋರ್ ಅವರನ್ನು ನಿತೀಶ್ ಕುಮಾರ್ ಜೆಡಿಯುಗೆ ಬರ ಮಾಡಿಕೊಂಡಿದ್ದಾರೆ.
ಸುಮಾರು 6 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್ ಕುಮಾರ್, ಕಾಂಗ್ರೆಸ್‌ಗೆ ಚುನಾವಣಾ ಕಾರ್ಯತಂತ್ರಗಾರರಾಗಿ ಕಾರ್ಯನಿರ್ವಹಿಸಿ ಚಾಣಕ್ಯ ಎನಿಸಿಕೊಂಡಿದ್ದರು.
2015ರಲ್ಲಿ ಬಿಹಾರದಲ್ಲಿ ಮಹಾಮೈತ್ರಿಕೂಟ ಅಸ್ತಿತ್ವಕ್ಕೆ ಬಂದ ನಂತರದಿಂದ ನಿತೀಶ್ ಜತೆಗಿನ ಪ್ರಶಾಂತ್ ಸಂಬಂಧ ಇನ್ನಷ್ಟು ಗಟ್ಟಿಯಾಗಿತ್ತು.
2014ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ಕಾರ್ಯತಂತ್ರಗಾರರಾಗಿ ಕಾರ್ಯನಿರ್ವಹಿಸಿದ್ದ ಪ್ರಶಾಂತ್ ಕಿಶೋರ್ ಅವರು ಎನ್‌ಡಿಎ ಮೈತ್ರಿಕೂಟದ ಪರ ಕೆಲಸ ನಿರ್ವಹಿಸುವ ಸಾಧ್ಯತೆಗಳಿವೆ . ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆಗಳು ಇವೆ ಎನ್ನಾಲಾಗಿದೆ.