Advertisement
ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಇಂದು( ಮಂಗಳವಾರ, ಜುಲೈ 13) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರನ್ನು ಭೇಟಿ ಮಾಡಿದ್ದು ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚಗೆ ಕಾರಣವಾಗುತ್ತಿದೆ.
Related Articles
Advertisement
ಸಭೆಯಲ್ಲಿ ಪಂಜಾಬ್ ಕಾಂಗ್ರೆಸ್ ನ ಉಸ್ತುವಾರಿ ಹರೀಶ್ ರಾವತ್, ಪಕ್ಷದ ಮುಖಂಡ ಕೆ. ಸಿ ವೇಣುಗೋಪಾಲ್ ಭಾಗಿಯಾಗಿದ್ದರು.
ಸಭೆಯ ಬಳಿಕ ಮಾಧ್ಯಮಗಳಿಗೆ ಸ್ಪಂಧಿಸಿದ ಹರೀಶ್ ರಾವತ್, ಮುಂದಿನ ಮೂರು ನಾಲ್ಕು ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದಿದ್ದಾರೆ.
ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೊಂದಿಗಿನ ರಾಹುಲ್ ಗಾಂಧಿ ಅವರ ಭೇಟಿಯ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ರಾವತ್, “ರಾಹುಲ್ ಗಾಂಧಿ ಒಬ್ಬ ರಾಷ್ಟ್ರೀಯ ನಾಯಕ. ಹಲವಾರು ಜನರು ಅವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸುತ್ತಾರೆ ಎಂದಿದ್ದಾರೆ.
ಇನ್ನು, ರಾಜಕೀಯಕ್ಕೆ ತಿರುಗಿದ ಮಾಜಿ ಕ್ರಿಕೇಟಿಗ ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಪಿಸಿಸಿ ಮುಖ್ಯಸ್ಥ ಹುದ್ದೆಯನ್ನು ಅಲಂಕರಿಸುತ್ತಿದ್ದಾರೆ ಎಂದು ಎನ್ನಲಾಗುತ್ತಿತ್ತು. ಈ ವಿಷಯವೇ, ಸಿಎಂ ಅಮರಿಂದರ್ ಸಿಂಗ್ ಅವರೊಂದಿಗಿನ ಜಟಾಪಟಿಗೆ ಕಾರಣವಾದ ವಿವಾದದ ಅಂಶಗಳಲ್ಲಿ ಇದೂ ಒಂದು ಎಂದು ಹೇಳಲಾಗಿದೆ.
ಏತನ್ಮಧ್ಯೆ, 2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಅಮರಿಂದರ್ ಸಿಂಗ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಹಾಗೂ ಸುನೀಲ್ ಜಖರ್ ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಪಿಸಿಸಿ) ಅಧ್ಯಕ್ಷರನ್ನಾಗಿ ನೇಮಿಸಲು ಪಕ್ಷ ನಿರ್ಧರಿಸಿದೆ ಎಂದು ಹೇಳಲಾಗುತ್ತಿರುವುದಾಗಿ ವರದಿಯಾಗಿದೆ.
ಹೈ ಕಮಾಂಡ್ ಭೇಟಿಯಾಗಿದ್ದರು ಸಿಂಗ್ ದ್ವಯರು
ನವಜೋತ್ ಸಿಂಗ್ ಸಿಧು ಎರಡು ವಾರಗಳ ಹಿಂದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದರು. ಅದೇ ಸಮಯದಲ್ಲಿ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಸಭೆ ನಡೆಸಿದ್ದರು.
ಇದನ್ನೂ ಓದಿ : ಸಂಸ್ಥೆಗಳಿಗೆ ಸಂಭಾವನೆ ಬಾಕಿ ಹಿನ್ನೆಲೆ : ಗೂಗಲ್‌ಗೆ ಫ್ರಾನ್ಸ್‌ನಲ್ಲಿ 4,417 ಕೋಟಿ ದಂಡ