Advertisement

ಪಂಜಾಬ್ ಸಿಎಂ ಸಿಂಗ್ ರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜೀನಾಮೆ..!

10:38 AM Aug 05, 2021 | Team Udayavani |

ನವ ದೆಹಲಿ : ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಈ ಕುರಿತಾಗಿ ಸೀಂಗ್ ಗೆ ಕಿಶೋರ್ ಪತ್ರ ಬರೆದಿದ್ದು, “ಸಾರ್ವಜನಿಕ ಜೀವನದಲ್ಲಿ ಸಕ್ರಿಯನಾಗುವ ಉದ್ದೇಶದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳಲು ಬಯಸುತ್ತೇನೆ” ಎಂದು ಉಲ್ಲೇಖಿಸಿದ್ದಾರೆ ಎಂದು ವರಿಯಾಗಿದೆ.

ಭವಿಷ್ಯದ ಬಗ್ಗೆ ಈಗೇನೂ ಯೋಚನೆ ಮಾಡಿಲ್ಲ. ಮುಂದೆ ರಾಜಕೀಯದೊಂದಿಗೆಯೇ ಇರುತ್ತೇನೋ, ಇಲ್ಲವೋ ಎನ್ನುವುದರ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಎಂದು ಕೂಡ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಸಂಪುಟದಲ್ಲಿ ಸಿಎಂ ಬೊಮ್ಮಾಯಿ ಬ್ಯಾಲೆನ್ಸ್: ಬಿಎಸ್ ವೈ- ಹೈಕಮಾಂಡ್ ಕೊಂಡಿ

“ನಿಮಗೆ ತಿಳಿದಿರುವಂತೆ, ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಉದ್ದೇಶದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳುವ ನನ್ನ ನಿರ್ಧಾರದ ದೃಷ್ಟಿಯಿಂದ, ನಿಮ್ಮ ಪ್ರಧಾನ ಸಲಹೆಗಾರನಾಗಿ ನಾನು ಜವಾಬ್ದಾರಿಯಿಂದ ಹೊರಬರಲು ಇಚ್ಛಿಸಿದ್ದೇನೆ. ನನ್ನ ಮುಂದಿನ ಕ್ರಮದ ಬಗ್ಗೆ ನಾನು ಇನ್ನೂ ತೀರ್ಮಾನಿಸದ ಕಾರಣ, ಈ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸುವಂತೆ ವಿನಂತಿಸುತ್ತೇನೆ “ಎಂದು ಪತ್ರದಲ್ಲಿ ಬರೆದಿರುವುದಾಗಿ ವರದಿ ತಿಳಿಸಿದೆ.

Advertisement

ಇನ್ನು, ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೊಂದಿಗೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ರಹಸ್ಯ ಸಭೆಯಲ್ಲಿ ಮಾತನಾಡಿದ್ದು, ರಾಷ್ಟ್ರೀಯ ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

ರಾಹುಲ್ ಗಾಂಧಿ, ಪ್ರಶಾಂತ್ ಕಿಶೋರ್ ಪಕ್ಷಕ್ಕೆ ಸೇರ್ಪಡೆಗೊಂಡರೇ ಹೇಗೆ..? ಅವರು ನಮ್ಮ ಪಕ್ಷದ ನೀತಿ, ನಿಯಮ, ಸಿದ್ಧಾಂತಗಳಿಗೆ ಒಪ್ಪುತ್ತಾರೆಯೇ ಎಂದು ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ಮಾಡಿರುವುದಾಗಿ ಹೆಸರನ್ನು ಬಹಿರಂಗ ಪಡಿಸಲಿಚ್ಛಿಸದ ಕೆಲವು ಹಿರಿಯ ಕಾಂಗ್ರೆಸ್ ನಾಯಕರು ತಿಳಿಸಿರುವುದಾಗಿ ಇತ್ತೀಚೆಗೆ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿದ್ದವು.

ಇದನ್ನೂ ಓದಿ : ಈ ರಾಶಿಯವರ ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯಗಳು ಪುನರಾರಂಭ ಸಾಧ್ಯತೆ

Advertisement

Udayavani is now on Telegram. Click here to join our channel and stay updated with the latest news.

Next