Advertisement

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

07:57 AM Jan 06, 2025 | Team Udayavani |

ಹೊಸದಿಲ್ಲಿ: ಪಾಟ್ನಾದ ಗಾಂಧಿ ಮೈದಾನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ (Prashant Kishor) ಅವರನ್ನು ಸೋಮವಾರ (ಜ.06) ಬೆಳಗ್ಗೆ ಬಿಹಾರ ಪೊಲೀಸರು ಬಂಧಿಸಿದ್ದಾರೆ.

Advertisement

ಪ್ರಶಾಂತ್ ಕಿಶೋರ್ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಬಲವಂತವಾಗಿ ಏಮ್ಸ್‌ ಗೆ ಕರೆದೊಯ್ಯಲಾಯಿತು. ಅವರನ್ನು ಎಲ್ಲರಿಂದ ಪ್ರತ್ಯೇಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಶಾಂತ್‌ ಕಿಶೋರ್ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ ಮತ್ತು ಆಮರಣಾಂತ ಉಪವಾಸವನ್ನು ಮುಂದುವರೆಸಲಿದ್ದಾರೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡ ವೀಡಿಯೊದಲ್ಲಿ, ಪಾಟ್ನಾ ಪೊಲೀಸರ ದೊಡ್ಡ ತಂಡವು ಪ್ರಶಾಂತ್ ಕಿಶೋರ್ ಅವರನ್ನು ಪ್ರತಿಭಟನಾ ಸ್ಥಳದಿಂದ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿರುವುದನ್ನು ಕಾಣಬಹು. ಇದೇ ವೇಳೆ ಅವರ ಸಹ ಪ್ರತಿಭಟನಾಕಾರರು ಅವರನ್ನು ಹಿಡಿದಿಡಲು ಪ್ರಯತ್ನಿಸುತ್ತಿದ್ದಾರೆ.

Advertisement

ಇತ್ತೀಚೆಗಷ್ಟೆ ಪೂರ್ಣಾವಧಿ ರಾಜಕೀಯಕ್ಕೆ ಧುಮುಕಿದ ಪ್ರಶಾಂತ್‌ ಕಿಶೋರ್‌ ಅದಕ್ಕೂ ಮುನ್ನ ಚುನಾವಣಾ ತಂತ್ರಗಾರರಾಗಿದ್ದರು. ಬಿಹಾರ ಸಾರ್ವಜನಿಕ ಸೇವಾ ಆಯೋಗದಿಂದ (BPSC) ನಡೆಸುತ್ತಿರುವ ಸಮಗ್ರ 70ನೇ ಸಂಯೋಜಿತ (ಪ್ರಾಥಮಿಕ) ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬೆಂಬಲಕ್ಕಾಗಿ ಜನವರಿ 2 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರಿಂದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next