Advertisement
ಪ್ರಶಾಂತ್ ಕಿಶೋರ್ ಅವರನ್ನು ಆಂಬ್ಯುಲೆನ್ಸ್ನಲ್ಲಿ ಬಲವಂತವಾಗಿ ಏಮ್ಸ್ ಗೆ ಕರೆದೊಯ್ಯಲಾಯಿತು. ಅವರನ್ನು ಎಲ್ಲರಿಂದ ಪ್ರತ್ಯೇಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Related Articles
Advertisement
ಇತ್ತೀಚೆಗಷ್ಟೆ ಪೂರ್ಣಾವಧಿ ರಾಜಕೀಯಕ್ಕೆ ಧುಮುಕಿದ ಪ್ರಶಾಂತ್ ಕಿಶೋರ್ ಅದಕ್ಕೂ ಮುನ್ನ ಚುನಾವಣಾ ತಂತ್ರಗಾರರಾಗಿದ್ದರು. ಬಿಹಾರ ಸಾರ್ವಜನಿಕ ಸೇವಾ ಆಯೋಗದಿಂದ (BPSC) ನಡೆಸುತ್ತಿರುವ ಸಮಗ್ರ 70ನೇ ಸಂಯೋಜಿತ (ಪ್ರಾಥಮಿಕ) ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬೆಂಬಲಕ್ಕಾಗಿ ಜನವರಿ 2 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರಿಂದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.