Advertisement

ಪ್ರಶಾಂತ್‌ ಕಿಶೋರ್‌ ರಾಜಕೀಯಕ್ಕೆ?

02:15 AM Sep 10, 2018 | Team Udayavani |

ಪಾಟ್ನಾ: ಸುಮಾರು 6 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್‌ ಕುಮಾರ್‌, ಕಾಂಗ್ರೆಸ್‌ಗೆ ಚುನಾವಣಾ ಕಾರ್ಯತಂತ್ರಗಾರರಾಗಿ ಕಾರ್ಯನಿರ್ವಹಿಸಿ, ಚಾಣಕ್ಯ ಎನಿಸಿಕೊಂಡಿರುವ ಪ್ರಶಾಂತ್‌ ಕಿಶೋರ್‌ ಅವರು ಈಗ ತಾವೇ ಚುನಾವಣಾ ರಾಜಕೀಯಕ್ಕೆ ಧುಮುಕಲು ನಿರ್ಧರಿಸಿದ್ದಾರೆ.

Advertisement

ಹೈದರಾಬಾದ್‌ನ ಇಂಡಿಯನ್‌ ಸ್ಕೂಲ್‌ ಆಫ್ ಬ್ಯುಸಿನೆಸ್‌ನ ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಸ್ವತಃ ಪ್ರಶಾಂತ್‌ ಕಿಶೋರ್‌ ಅವರೇ ಈ ವಿಚಾರ ಬಹಿರಂಗಪಡಿಸಿದ್ದಾರೆ. ಆದರೆ, ತಾವು ಯಾವ ರಾಜಕೀಯ ಪಕ್ಷವನ್ನು ಸೇರುತ್ತೇನೆ ಎಂಬುದನ್ನು ಅವರು ಗುಟ್ಟಾಗಿಯೇ ಇಟ್ಟಿದ್ದಾರೆ. ಆದರೂ, ನಿತೀಶ್‌ ಕುಮಾರ್‌ ಅವರ ಜೆಡಿಯು ಸೇರ್ಪಡೆಗೊಳ್ಳುವ ಸುಳಿವು ನೀಡಿದ್ದಾರೆ ಎನ್ನಲಾಗಿದೆ. 2015ರಲ್ಲಿ ಬಿಹಾರದಲ್ಲಿ ಮಹಾಮೈತ್ರಿಕೂಟ ಅಸ್ತಿತ್ವಕ್ಕೆ ಬಂದ ನಂತರದಿಂದ ನಿತೀಶ್‌ ಜತೆಗಿನ ಪ್ರಶಾಂತ್‌ ಸಂಬಂಧ ಇನ್ನಷ್ಟು ಗಟ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.

2014ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ಸ್ಟ್ರ್ಯಾಟಜಿಸ್ಟ್‌ ಆಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಬಿಜೆಪಿಯಿಂದ ದೂರ ಹೋಗಿ ಕಾಂಗ್ರೆಸ್‌ ಸೇರಿದಂತೆ ಇತರೆ ಪಕ್ಷಗಳಿಗೆ ಕಾರ್ಯ ತಂತ್ರ ರೂಪಿಸುವ ಕೆಲಸದಲ್ಲಿ ನಿರತರಾಗಿದ್ದರು. ಇದೀಗ ಅವರೇ ರಾಜಕೀಯ ಸೇರಲು ನಿರ್ಧರಿಸಿರುವುದು ಕುತೂಹಲ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next