Advertisement

Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ

08:06 PM May 25, 2024 | Team Udayavani |

ಬಳ್ಳಾರಿ: ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪರೆಡ್ಡಿಯವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

Advertisement

ಇದನ್ನೂ ಓದಿ: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದ ಎನ್.ಪ್ರತಾಪರೆಡ್ಡಿಯವರು, ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಬಯಸಿದ್ದರು. ಆದರೆ, ಟಿಕೇಟ್ ನೀಡಿಲ್ಲ. ಪರಿಣಾಮ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿದ್ದಾರೆ. ಇವರ ಈ ನಡೆ ಪಕ್ಷ ವಿರೋಧಿ ಚಟುವಟಿಕೆಯಾಗಿರುವ ಹಿನ್ನೆಲೆಯಲ್ಲಿ ಎನ್.ಪ್ರತಾಪರೆಡ್ಡಿಯವರನ್ನು ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಮುಂದಿನ 6 ವರ್ಷಗಳವರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಇವರಿಗೆ ಯಾರೂ ಬೆಂಬಲ ಸೂಚಿಸಿ, ಪ್ರಚಾರದಲ್ಲಿ ತೊಡಗಿದರೂ ಅಂತಹವರ ವಿರುದ್ಧವೂ ಶಿಸ್ತು ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next