Advertisement
ಸಂವಿಧಾನದ ಮೂಲ ಚೌಕಟ್ಟನ್ನೇ ಹಾಳು ಮಾಡಿದ್ದು ಕಾಂಗ್ರೆಸ್. ಬಿಜೆಪಿಯ ಮೇಲೆ ಆರೋಪ ಹೊರಿಸುವ ಮೊದಲು ಕಾಂಗ್ರೆಸ್ಸಿಗರು ಈ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೇಳಿದರು.
Related Articles
ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನದ ರಕ್ಷಣೆಗಾಗಿ ಎರಡು ಮೂರು ತಲೆಮಾರು ಶ್ರಮಪಟ್ಟಿದೆ. ಇದು ಸ್ವಾತಂತ್ರ್ಯ ಹೋರಾಟಕ್ಕೆ ಸಮ. ಆದರೆ ಅವರಿಗೆ ಏನೂ ಪ್ರತಿಫಲ ಸಿಕ್ಕಿಲ್ಲ. ಕಾಂಗ್ರೆಸ್‌ಗೆ ಮತ್ತೆ ಅಧಿಕಾರವನ್ನು ಕೊಟ್ಟರೆ ದೇಶದಲ್ಲಿ ಏನೇನು ಆಗಬಹುದು ಎನ್ನುವುದನ್ನು ಮುಂದಿನ ತಲೆಮಾರಿಗೆ ತಿಳಿಸುವ, ಎಚ್ಚರಿಸುವ ಕೆಲಸ ನಾವು ಮಾಡಬೇಕು ಎಂದರು.
Advertisement
ದ.ಕ. ಜಿಲ್ಲಾ ಕೊಟ್ಟಾರಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಶಾಸಕ ವೇದವ್ಯಾಸ ಕಾಮತ್, ವಿಭಾಗ ಸಂಚಾಲಕ ಡಾ| ಎನ್. ನವೀನ್, ಮಾಜಿ ಶಾಸಕ ರುಕ್ಮಯ ಪೂಜಾರಿ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದ ಸಂಚಾಲಕ, ಮೇಯರ್ ಸು ಧೀರ್ ಶೆಟ್ಟಿ ಕಣ್ಣೂರು ಸ್ವಾಗತಿಸಿದರು. ರಾಕೇಶ್ ರೈ ಕಡೆಂಜಿ ಕಾರ್ಯಕ್ರಮ ನಿರೂಪಿಸಿದರು.
“ಜಾತ್ಯತೀತ’ ಪದ ಸೇರಿಸಿದ್ದು ಕಾಂಗ್ರೆಸ್ಡಾ| ಬಿ.ಆರ್.ಅಂಬೇಡ್ಕರ್ ಅವರ ಮೂಲ ಸಂವಿಧಾನದಲ್ಲಿ “ಜಾತ್ಯತೀತ’ ಎನ್ನುವ ಪದವೇ ಇಲ್ಲ. ಆದರೆ 42ನೇ ತಿದ್ದುಪಡಿಯಲ್ಲಿ ಇಂದಿರಾ ಗಾಂಧಿಯವರು ಸೇರ್ಪಡೆ ಮಾಡಿದರು. ನಮಗೆ ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ನಂಬಿಕೆ ಇದೆ ಹೊರತು, ತಿದ್ದುಪಡಿ ಮಾಡಿದ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.