Advertisement

ಅಧಿಕಾರಿಗಳನ್ನು ಟ್ರಾನ್ಸಫರ್ ಮಾಡುವುದೇ ತಾಕತ್ತಾದರೆ, ಆ ತಾಕತ್ತು ನನಗೆ ಬೇಡ: ಪ್ರತಾಪ್ ಸಿಂಹ

03:30 PM May 28, 2021 | Team Udayavani |

ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡುವುದೇ ತಾಕತ್ತಾದರೆ ಅಂತಹ ತಾಕತ್ತು ನನಗೆ ಬೇಡ ಎಂದು ಶಾಸಕ ಜಿಟಿ.ದೇವೇಗೌಡರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

Advertisement

ನಿನಗೆ ತಾಕತ್ತಿದ್ದರೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿಸು ಎಂದು ಜಿಟಿ ದೇವೇಗೌಡರು ಸವಾಲು ಹಾಕಿದ್ದರು. ಇದಕ್ಕೆ ಉತ್ತರಿಸಿದ ಪ್ರತಾಪ್ ಸಿಂಹ, ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೆನೆ ಎಂದರು.

ಇದನ್ನೂ ಓದಿ:ತಾಕತ್ತಿದ್ದರೆ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿಸು: ಪ್ರತಾಪ್ ಸಿಂಹಗೆ ಜಿಟಿಡಿ ಸವಾಲು

ಮೈಸೂರಿಗೆ ನಾನು ಹೊರಗಿನವನು. ಆದರೂ ಮೊದಲ ಚುನಾವಣೆಯಲ್ಲಿ ಮೈಸೂರು- ಕೊಡಗಿನ ಜನ ಮೂವತ್ತು ಸಾವಿರ ಅಂತರದ ಮತಗಳಿಂದ ಗೆಲ್ಲಿಸಿದ್ದರು. ನನ್ನ ತಾಕತ್ತು ತೋರಿಸಿ ಒಳ್ಳೆಯ ಕೆಲಸ ಮಾಡಿದ್ದರಿಂದಾಗಿ, ಎರಡನೇ ಚುನಾವಣೆಯಲ್ಲಿ ಒಂದು ಲಕ್ಷದ ನಲವತ್ತು ಸಾವಿರ ಮತಗಳಿಂದ ಗೆಲ್ಲಿಸಿದ್ದರು. ಇದಕ್ಕಿಂತಲೂ ನಾನು ಯಾವ ತಾಕತ್ತು ತೋರಿಸಬೇಕು ಎಂದರು.

ಜಿಲ್ಲಾಧಿಕಾರಿ ಅಥವಾ ಇನ್ಯಾವುದೋ ಅಧಿಕಾರಿಯನ್ನು ವರ್ಗಾವಣೆ ಮಾಡಿಸುದು ರಾಜಕಾರಣಿಗಳಿಗೆ ಸಾಮಾನ್ಯ ವಿಚಾರ. ನನ್ನ ದೃಷ್ಟಿಯಲ್ಲಿ ಅದು ಅತ್ಯಂತ ಅಣ್ಣ ಕೆಲಸ. ಅಂತಹ ಸಣ್ಣ ಕೆಲಸವನ್ನ ನಾನು ಮಾಡುವುದಿಲ್ಲ. ಸರ್ಕಾರ ಕೊಟ್ಟ ಅಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತೆನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next