ಮೈಸೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮಾಧ್ಯಮಗಳ ಮೂಲಕ ನಿರೀಕ್ಷಣಾ ಜಾಮೀನು ಹಾಕುತ್ತಿದೆ. ಈ ಪ್ರಕರಣದಲ್ಲಿ ಗಂಭೀರವಾಗಿ ತನಿಖೆ ಮಾಡಿದರೆ ಕಾಂಗ್ರೆಸ್‌ನವರೇ ಇದರಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ. ಈಗಾಗಲೇ ಮೊದಲ ಚಾರ್ಜ್ ಶೀಟ್‌ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರು ಉಲ್ಲೇಖವಾಗಿದೆ. ಹೀಗಾಗಿ ಕಾಂಗ್ರೆಸ್ ನವರಿಗೆ ಭಯ ಬಂದು ನಿರೀಕ್ಷಣಾ ಜಾಮೀನು ಹಾಕುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಫೆಲ್ ವಿಚಾರದಲ್ಲೂ ಕಾಂಗ್ರೆಸ್ ನ ಅವ್ವ- ಮಗಾ ಹೀಗೆ ಮಾಡಿದರು. ತಾವು ಡೀಲ್ ಮಾಡಿಕೊಂಡು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದರು. ಈಗ ಅವರ ಡೀಲ್ ಬಯಲಾಗಿದೆ. ರಾಜ್ಯದಲ್ಲೂ ಅದೇ ತಂತ್ರವನ್ನು ಕಾಂಗ್ರೆಸ್ ಪ್ರಯೋಗಿಸುತ್ತಿದೆ. ಈ ಪ್ರಕರಣವು ಕಾಂಗ್ರೆಸ್ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಇದರಿಂದ ಕಾಂಗ್ರೆಸ್ ಬಿಜೆಪಿಯ ಮೇಲೆ ಮೊದಲೇ ಆರೋಪ ಮಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯನವರು ಮಹಾನ್ ಆರ್ಥಿಕಾ ತಜ್ಞರು. ಬಿಟ್ ಕಾಯಿನ್ ಎಂದರೇನು? ಅದ ವ್ಯವಹಾರದ ಬಗ್ಗೆ ಅದನ್ನು ನಮ್ಮಂತವರಿಗೆ ವಿವರಿಸಲಿ, ಆ ಬಗ್ಗೆ ತಿಳಿದುಕೊಳ್ಳುವ ಕುತೂಹಲ ನಮಗಿದೆ. ನನಗೆ ಆ ಬಗ್ಗೆ ಮಾಹಿತಿ ಇಲ್ಲ, ಹಾಗಾಗಿ ಕೇಳುತ್ತಿದ್ದೇನೆ. ಬೊಮ್ಮಾಯಿ ಅವರ ಯಶಸ್ವಿ ಆಡಳಿತ ಸಹಿಸದೆ ಹೀಗೆ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಸರ್ವ ಜನಾಂಗವನ್ನು ಒಗ್ಗೂಡಿಸಿ ಆಡಳಿತ ನಡೆಸಿದ್ದರು ಟಿಪ್ಪು: ಸೈಯದ್ ನಾಸೀರ್ ಹುಸೇನ್
ಬಿಟ್ ಕಾಯಿನ್ ವಿಚಾರದಲ್ಲಿ ಪ್ರಿಯಾಂಕ ಖರ್ಗೆ ಟ್ವಿಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸದಾಶಿವನಗರದಲ್ಲಿ ನಾಲ್ಕು ಭವ್ಯ ಬಂಗಲೆ, ಒಂದೇ ನಂಬರ್ ನ ಬೆಂಝ್ ಕಾರು..! ನಾನು ನಿರ್ಗತಿಕ, ಶೋಷಣೆಗೆ ಒಳಗಾದವರು ಎಂದು ಹೇಳಿಕೊಳ್ಳುವವರಿಗೆ ಹೆಚ್ಚಿನ ಮನ್ನಣೆ ನೀಡುವ ಅಗತ್ಯ ಇಲ್ಲ. ಪ್ರಿಯಾಂಕ ಖರ್ಗೆ ಅವರಿಗೆ ಮೆಚ್ಯುರಿಟಿ ಇದೆಯೋ ಇಲ್ಲವೋ ಎಂದು ನೀವೇ ತೀರ್ಮಾನ ಮಾಡಿಕೊಳ್ಳಿ ನಾನು ಹೇಳುವುದಿಲ್ಲ ಎಂದರು.