Advertisement

ಉಚಿತ ಯೋಜನೆಗಳು ಗಂಡನನ್ನು ದರೋಡೆ ಮಾಡಿ ಪತ್ನಿಗೆ ಕೊಟ್ಟಂತಾಗಿದೆ: ಪ್ರತಾಪ್ ಸಿಂಹ

02:53 PM Jun 19, 2023 | Team Udayavani |

ಮೈಸೂರು: ಉಚಿತ ಯೋಜನೆಗಳು ಒಂಥರ ಗಂಡನ ದರೋಡೆ ಮಾಡಿ, ಪತ್ನಿಗೆ ಕೊಟ್ಟಂತಾಗಿದೆ. ಗಂಡನ ಜೇಬಿಗೆ ಕತ್ತರಿ ಹಾಕಿ ಪತ್ನಿಗೆ ಕೊಡುವುದರಲ್ಲಿ ಏನೂ ಅರ್ಥ ಇದೆ ಹೇಳಿ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ದರ ಯದ್ವಾತದ್ವಾ ಏರಿಕೆಯಾಗಿದೆ. ಜನರಿಗೆ ಕರೆಂಟ್ ಶಾಕ್ ಹೊಡೆದಿದೆ. ಕೈಗಾರಿಕಾ ಉದ್ಯಮಿಗಳು ಕರ್ನಾಟಕ ಬಂದ್ ಗೆ ಕರೆ ಮಾಡಿವೆ. ಕೈಗಾರಿಕೆಗಳಿಗೆ ಬರೆ ಹಾಕುವ ಕೆಲಸ ನಡೆಯುತ್ತಿದೆ 200 ಯೂನಿಟ್ ಫ್ರೀ ಅಂತಾ ಹೇಳಿದ್ದೀರಿ. ನಿಮ್ಮ ಮನೆಯಲ್ಲಿ ಎಷ್ಟು ವಿದ್ಯುತ್ ಖರ್ಚಾಗುತ್ತದೆ ಎಂಬ ಅರಿವು ನಿಮಗೆ ಇಲ್ವಾ? ನಿಮ್ಮದು ದೋಖಾ ಸರಕಾರ ಅಲ್ವಾ? ನಿಮ್ಮ ಮನೆಯಲ್ಲೇ ಎಷ್ಟು ವಿದ್ಯುತ್ ಖರ್ಚಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿಲ್ವಾ? ನಿಮ್ಮದು ದೋಖಾ ಸರಕಾರ ಎಂಬುದು ಸಾಬೀತಾಗಿದೆ. ರಾಜ್ಯದ ಜನರು ಕೈಗಾರಿಕೋದ್ಯಮಿಗಳು ಕರೆ ಕೊಟ್ಟ ಕರ್ನಾಟಕ ಬಂದ್ ಗೆ ಕೈ ಜೋಡಿಸಿ ಎಂದು ಮನವಿ ಮಾಡಿದರು.

ಮೋದಿ ಅಕ್ಕಿ ಮೊಡಲು ನೀವು ಗೆಲ್ಲಬೇಕಾ?: ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಬಿಜೆಪಿ ಒತ್ತಡ ತರಲಿ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ವಿಚಾರ, 5 ಕೆಜಿ ಅಕ್ಕಿ ಕೊಡುವುದು ಕೇಂದ್ರ ಸರಕಾರವೆಂದು ಪ್ರಥಮ ಬಾರಿಗೆ ಸತ್ಯ ಹೇಳಿದ್ದಕ್ಕೆ ಧನ್ಯವಾದ. ಮೋದಿ ಅವರ ಐದು ಕೆಜಿ ಗೆ 10 ಕೆಜಿ ಸೇರಿಸಿ ಕೊಡಬೇಕು ನೀವು. ಯಾರಾದೋ ದುಡ್ಡು ಕಾಂಗ್ರೆಸ್ ಜಾತ್ರೆ ನಾ ಇದು? ಮೋದಿ ಸರಕಾರದ ಅಕ್ಕಿ ಸಿದ್ರಾಮಣ್ಣನ ಜಾತ್ರೆನಾ? ಮೋದಿ ಅವರು ಅಕ್ಕಿ ಕೊಡಲು ನೀವು ಚುನಾವಣೆ ಗೆದ್ದು ಬರಬೇಕಾ? ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡಿ. ಅಕ್ಕಿ ಖರೀದಿ ಆಗದಿದ್ದರೆ ಗಂಡನ ಅಕೌಂಟ್ ಗೆ ಅಕ್ಕಿಯ ಹಣ ಹಾಕಿ ಎಂದರು.

ಇದನ್ನೂ ಓದಿ:Watch: ಸ್ವೀಟ್ಸ್‌ ಖರೀದಿಸಿ ಹಣ ಕೊಡಲ್ಲ ಎಂದ ಪಾನಮತ್ತ ಇನ್ಸ್‌ ಪೆಕ್ಟರ್ ವಿಡಿಯೋ ವೈರಲ್!

ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಎಲ್ಲಾ ಕಡೆ ಚುನಾವಣೆಯಿದೆ. ಅಲ್ಲೂ ನೀವು ಫ್ರೀ ಅಕ್ಕಿ ಘೋಷಣೆ ಮಾಡಿದರೆ ಅಕ್ಕಿ ಕೊಡಲು ಆಗುತ್ತಾ? ಮೋದಿ ಅವರ ಕೈಯಲ್ಲಿ ಅಷ್ಟು ಪ್ರಮಾಣದ ಅಕ್ಕಿ ಕೊಡಲು ಆಗಿದ್ದರೆ ನಾವೇ ಕೊಡುತ್ತಿದ್ದೇವೆ. ಮುಂಗಾರು ಕೈ ಕೊಟ್ಟಿದೆ. ಬರ ಬಂದರೆ, ಜಲಾಪ್ರಳಯವಾದರೆ ಅಂತಹ ಕಡೆ ಅಕ್ಕಿ ಕೊಡಬೇಕಾದರೆ ಕೇಂದ್ರ ಏನು ಮಾಡಬೇಕು ಎಂದು ಪ್ರಶ್ನಿಸಿದರು.

Advertisement

ಸಿದ್ದರಾಮಯ್ಯಗೆ ಪುಕ್ಕಲುತನ: ಮಹಾದೇವಪ್ಪ, ಎಂ.ಬಿ. ಪಾಟೀಲ್ ಇಬ್ಬರು ಐದು ವರ್ಷವೂ ಸಿದ್ದರಾಮಯ್ಯ ಸಿಎಂ ಎಂದು ಹೇಳಿದ್ದಾರೆ. ಸಿದ್ದರಾಮಯ್ಯರಿಗೆ ಅಧಿಕಾರ ಬಿಟ್ಟು ಕೊಡುವ ಇರಾದೆ ಇಲ್ಲ. ಸಿದ್ದರಾಮಯ್ಯ ತಮ್ಮ ಚೇಲಾ ಪಡೆ ಮೂಲಕ ತಾವೂ ಪೂರ್ಣ ಅವಧಿಗೆ ಸಿಎಂ ಎಂದು ಹೇಳಿಸುತ್ತಿದ್ದಾರೆ. ಸಿದ್ದರಾಮಯ್ಯ ಗೆ ತಾವೇ ಪೂರ್ಣವಧಿ ಸಿಎಂ ಎಂದು ನೇರವಾಗಿ ಹೇಳುವ ಧೈರ್ಯವಿಲ್ಲ. ಅವರಿಗೆ ಪುಕ್ಕಲುತನ. ಚುನಾವಣೆ ಗೆಲ್ಲಲು ಡಿಕೆ ಪಾತ್ರ ದೊಡ್ಡದಿದೆ. ಕಾಂಗ್ರೆಸ್ ಧಾರಾಳಾ ಮನಸ್ಸಿನಿಂದ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಮಾಡಿದೆ. ಸಿದ್ದರಾಮಯ್ಯ ಗೆ ಆ ಧಾರಳ ಉದಾರತನದ ಮನಸ್ಸು ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next