Advertisement

ನಾಲಗೆ ಮೇಲೆ ನಿಗಾ ಇರಲಿ:ದಿನೇಶ್‌ ಗುಂಡುರಾವ್‌ ವಿರುದ್ದ ಸಿಂಹ

01:45 PM Apr 15, 2018 | |

ಮೈಸೂರು: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್‌ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ದಿನೇಶ್‌ ಕುಂಡುರಾವ್‌ ವಿರುದ್ದ ಸಂಸದ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಕಿಡಿ ಕಾರಿದ್ದಾರೆ. 

Advertisement

‘ದಿನೇಶ್‌ ಗುಂಡುರಾವ್‌ ಅವರೇ ಯೋಗಿ ಆದಿತ್ಯನಾಥರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಅಂದಿದ್ದೀರಲ್ಲ ದಿನೇಶ್ ಗುಂಡೂರಾವ್, ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ, ನಿಮ್ಮ ಹೆಂಡತಿ ಬೇಗಂ ತಬ್ಬು ಅವರೇ ಆ ಕೆಲಸ ನಿಮಗೆ ಮಾಡಿರುತ್ತಿದ್ದರು, ನಾಲಗೆ ಮೇಲೆ ನಿಗಾ ಇರಲಿ’ ಎಂದು ಕಿಡಿ ಕಾರಿದ್ದಾರೆ. 

ಬಿಜೆಪಿ ಪ್ರತಿಭಟನೆ 

ದಿನೇಶ್‌ ಗುಂಡುರಾವ್‌ ಹೇಳಿಕೆ ಖಂಡಿಸಿ ಬಿಜೆಪಿ  ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಸಂಸದೆ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ವ್ಯಾಪಕ ಆಕ್ರೋಶ ಹೊಸ ಹಾಕಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next