ಕುಂದಾಪುರ: ಎಕ್ಸ್‌ಲೆಂಟ್ ಮತ್ತು ಲಿಟ್ಲ್ ಸ್ವಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 5ನೇ ರ‍್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಿ, 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು.
ಐ.ಎ.ಎಸ್. ಅಧಿಕಾರಿಯಾಗುವ ಆಸೆ:
ಈ ಸಂದರ್ಭದಲ್ಲಿ ಮಾತನಾಡಿದ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಪ್ರತ್ವಿತಾ ಪಿ. ಶೆಟ್ಟಿ ಮುಂದೆ ಯು.ಪಿ.ಎಸ್.ಸಿ. ಪರೀಕ್ಷೆ ಬರೆದು ಐ.ಎ.ಏಸ್ ಅಧಿಕಾರಿಯಾಗುವ ಆಸೆಯಿದೆ ಎನ್ನುತ್ತಾ, ನಮ್ಮ ಶಾಲೆಯ ಶಿಕ್ಷಕರು ನಮ್ಮೊಂದಿಗೆ ಸಂಜೆ 6 ರ ನಿಂತು ನಿರಂತರ ತರಬೇತಿ ನೀಡಿರುವುದರಿಂದ ಈ ಅಂಕ ಗಳಿಸಲು ಸಹಕಾರಿಯಾಯಿತು ಎಂದರು.
ನನ್ನ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ಶಾಲೆಯ ಆಡಳಿತ ಮಂಡಳಿ, ಭೋದಕ, ಭೋದಕೇತರ ಸಿಬ್ಬಂದಿ ವರ್ಗ ಮತ್ತು ಪೋಷಕರಿಗೆ ಚಿರಖಣಿಯಾಗಿದ್ದೇನೆ ಎಂದರು.
ಎಮ್.ಎಮ್.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಎಮ್. ಮಹೇಶ ಹೆಗ್ಡೆ ಶುಭ ಹಾರೈಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.