Advertisement

ಮಕ್ಕಳ ಕಲೆ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕ

12:51 PM Sep 10, 2017 | Team Udayavani |

ಹುಮನಾಬಾದ: ಮಕ್ಕಳಲ್ಲಿ ಅಡಗಿರುವ ಕಲೆ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

Advertisement

ಪಟ್ಟಣದ ಶಿವಯೋಗೇಶ್ವರ ಶಾಲಾ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ
ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳ ಪ್ರತಿಭಾ ಕಾರಂಜಿ ಕಲಾ ಉತ್ಸವ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ಇಂದಿನ ಮಕ್ಕಳಲ್ಲಿ ವಿವಿಧ ಕಲೆಗಳು ಅಡಗಿವೆ. ಅವರಲ್ಲಿನ ಕಲೆ ಹೊರ ಹಾಕಲು ಶಿಕ್ಷಕರು ಶ್ರಮಿಸಬೇಕಾಗಿದೆ. ಶಿಕ್ಷಕರು
ತಮ್ಮ ಕರ್ತವ್ಯ ಅರಿತುಕೊಂಡು ಕಾರ್ಯ ನಿರ್ವಹಿಸಿದರೆ ನಮ್ಮ ಭಾಗದಲ್ಲಿ ಶಿಕ್ಷಣ ಕ್ರಾಂತಿಯಾಗುತ್ತದೆ. ಕಳೆದ
ಕೆಲ ವರ್ಷಗಳಿಂದ ಬೀದರ ಜಿಲ್ಲೆ ಫಲಿತಾಂಶದಲ್ಲಿ ಕೊನೆ ಸ್ಥಾನಕ್ಕೆ ಕುಸಿಯುತ್ತಿದೆ. ಇದನ್ನು ಶಿಕ್ಷಕರು ಆತ್ಮ ಅವಲೋಕನ
ಮಾಡಿಕೊಳ್ಳಬೇಕು. ಬರುವ ವರ್ಷದ ಫಲಿತಾಂಶ ಸುಧಾರಣೆಗೆ ಎಲ್ಲಾ ಶಿಕ್ಷಕರು ಶ್ರಮಿಸಬೇಕು. ಕೊನೆ
ಸ್ಥಾನದಿಂದ ಬೀದರ ಜಿಲ್ಲೆ ಮುಕ್ತಿ ನೀಡಬೇಕು ಎಂದು ಹೇಳಿದರು.

ಸಂಸದ ಭಗವಂತ ಖೂಬಾ ಮಾತನಾಡಿ, ಗ್ರಾಮೀಣ ಮಕ್ಕಳ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಲಿದೆ. ಮಕ್ಕಳು ಓದಿನ ಜತೆಯಲ್ಲಿ ಆಟ, ಸಂಗೀತ, ನೃತ್ಯದಂತಹ ಹವ್ಯಾಸ ಮೈಗೂಡಿಸಿಕೊಳ್ಳಬೇಕು. ಮಕ್ಕಳು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ಪ್ರತಿಭಾವಂತರಾಗಲು ಸಾಧ್ಯವಾಗುತ್ತದೆ. 

2022ರಲ್ಲಿ ಭಾರತ ಸ್ವಾತಂತ್ರ್ಯ ಪಡೆದ 75ನೇ ವರ್ಷಾಚರಣೆ ನಿಮಿತ್ತ ಪ್ರಧಾನಿ ಮೋದಿ ಅವರು ಯುವ ಭಾರತ ನಿರ್ಮಾಣ ಸಂಕಲ್ಪದ ಹೊಸ ಯೋಜನೆ ಅನುಷ್ಠಾನಗೊಳಿಸಿ ಯುವ ಜನತೆಗೆ ಹೊಸ ಚೈತನ್ಯ ತುಂಬುವ ಕಾರ್ಯ ನಡೆಯಲಿದೆ ಎಂದು ಹೇಳಿದರು.

Advertisement

ಹಿರೇಮಠದ ಶ್ರೀ ರೇಣುಕ ಗಂಗಾಧರ ಶಿವಾಚಾರ್ಯರು ಮಾತನಾಡಿ, ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಿ ಸೇವೆ
ಸಲ್ಲಿಸಿದರೆ ನಮ್ಮ ಭಾಗದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ, ಪ್ರಾಚಾರ್ಯ ವೈ.ಆರ್‌. ನಂದಿಹಳ್ಳಿ, ಕ್ಷೇತ್ರ ಶಿಕ್ಷಣಾಧಿ ಕಾರಿ ಶಿವರಾಚಪ್ಪ
ವಾಲಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಓಂಕಾರ ರೋಗನ, ಸಮನ್ವಯಾ ಧಿಕಾರಿ ಶಿವಕುಮಾರ ಪಾರಶೆಟ್ಟಿ,
ನಾಗಶೆಟ್ಟಿ ಡುಮಣಿ, ರವೀಂದ್ರ ರೆಡ್ಡಿ, ಮುರಘೇಂದ್ರ ಸಜ್ಜನ, ದತ್ತಕುಮಾರ ಚಿದ್ರಿ, ಮಲ್ಲಿಕಾರ್ಜುನ ಕುಂಬಾರ, ಶಿವರಾಜ
ಮೇತ್ರೆ, ಬಸವರಾಜ ಜನ್ನಕಟ್ಟಿ, ಮಾರುತಿ ಪೂಜಾರ, ವೀರಂತರೆಡ್ಡಿ ಜಂಪಾ, ರಮೇಶ ರಾಜೋಳೆ, ಅಮೀತ,
ಅನಂತರೆಡ್ಡಿ, ಜಗದೀಶ ಹಿರೇಮಠ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next