ಪುತ್ತೂರು: ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ-ಚೆನ್ನಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರದಲ್ಲಿ ಜಗದೀಶ ಅಧಿಕಾರಿ ಆಡಿದ ಮಾತಿಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಅವರ ಮುಖಕ್ಕೆ ಮಸಿ ಬಳಿಯುವವರಿಗೆ 1 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದ ಪ್ರತಿಭಾ ಕುಳಾಯಿ ಅವರು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿಗೆ ಆಗಮಿಸಿ ಆ ಹಣವನ್ನು 10 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗಾಗಿ ವಿತರಿಸಿದ್ದಾರೆ.
ಇದನ್ನೂ ಓದಿ:ಅರಣ್ಯಾಧಿಕಾರಿಗಳ ದೌರ್ಜನ್ಯ ಆರೋಪ: ಅಮಾಸೆಬೈಲು ಫಾರೆಸ್ಟ್ ಕಚೇರಿಗೆ ಮುತ್ತಿಗೆ ಪ್ರತಿಭಟನೆ
ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಗೆಜ್ಜೆಗಿರಿಯ ಸತ್ಯಧರ್ಮ ಚಾವಡಿಯಲ್ಲಿ ಪ್ರತಿಭಾ ಅವರು ಈ ಮೊತ್ತವನ್ನು ನೀಡಿದರು.
ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೇತ್ರದ ಆನುವಂಶಿಕ ಮೊಕ್ತೇಸರ ಶ್ರೀಧರ ಪೂಜಾರಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಟಿಎಂಸಿ ಪಶ್ಚಿಮಬಂಗಾಳವನ್ನು ಬಾಂಗ್ಲಾದೇಶವನ್ನಾಗಿ ಮಾಡಲು ಹೊರಟಿದೆ: ಸುವೇಂದು