Advertisement

ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

06:12 PM Oct 21, 2022 | Team Udayavani |

ಚಾಮರಾಜನಗರ: ರಾಜ್ಯ ಸಫಾಯಿ ಕರ್ಮ ಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಶನಿವಾರ ಚಾಮರಾಜನಗರದಲ್ಲಿ ಹಮ್ಮಿಕೊಂಡಿರುವ ಪ್ರತಿಭಾ ಪುರಸ್ಕಾರ ಹಾಗೂ ಎಂ.ಎಸ್‌. ಕಾಯಿದೆ 2013ರ ಕುರಿತು ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಕೋಟೆ ಸಿದ್ಧತೆಗಳನ್ನು ಪರಿಶೀಲಿಸಿದರು.

Advertisement

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ, ಅಧಿಕಾರಿಗಳು ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದ ಎಂ. ಶಿವಣ್ಣ ,ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಲಾ ತಂಡಗಳ ಮೆರವಣಿಗೆ: ಶಿಷ್ಟಾಚಾರ ಅನುಸಾರ ಜನಪ್ರತಿನಿಧಿಗಳು, ಇತರೆ ಗಣ್ಯರು ಆಗಮಿಸಲಿದ್ದಾರೆ. ಪ್ರತಿಭಾ ಪುರಸ್ಕಾರ, ಅರಿವು ಮೂಡಿಸುವ ಕಾರ್ಯಕ್ರಮ, ಮ್ಯಾನ್ಯುಯಲ್‌ ಸ್ಕಾ$Rವೆಂಜಿಂಗ್‌ ನಿರ್ಮೂಲನೆ ಬಗ್ಗೆ ನಾಟಕ ಪ್ರದರ್ಶನ ಏರ್ಪಾಡಾಗಿವೆ. ಕಾರ್ಯಕ್ರಮದಂದು ಪೂರ್ಣಕುಂಭ ಸ್ವಾಗತ, ಡೊಳ್ಳು ಕುಣಿತ, ನಗಾರಿ ಇನ್ನಿತರ ಕಲಾ ತಂಡಗಳ ಮೆರವಣಿಗೆ ಸಹ ಇರಲಿದೆ. ಕಾರ್ಯಕ್ರಮ ಸಂಪೂರ್ಣ ಯಶಸ್ವಿಗೆ ಅಧಿಕಾರಿಗಳು ತೊಡಗಿಕೊಳ್ಳಬೇಕೆಂದು
ನಿರ್ದೇಶನ ನೀಡಿದರು.

ಸಿದ್ಧತೆಗಳ ಬಗ್ಗೆ ತಯಾರು ಮಾಡಿಕೊಳ್ಳಿ: ಕಾರ್ಯಕ್ರಮದಲ್ಲಿ ನೀಡಲಾಗುವ ಸವಲತ್ತುಗಳ ಸಂಬಂಧ ವಿವರ ಪಡೆದ ಅಧ್ಯಕ್ಷರು ಪೂರ್ವಭಾವಿ ಯಾಗಿ ಎಲ್ಲಾ ಸಿದ್ಧತೆಗಳ ಬಗ್ಗೆ ತಯಾರು ಮಾಡಿ ಕೊಳ್ಳಬೇಕು. ಫ‌ಲಾನುಭವಿಗಳು ಹಾಗೂ ಅವರ ಕುಟುಂಬದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎಲ್ಲಾ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳ ಬೇಕು. ಈ ವಿಶೇಷ ಕಾರ್ಯಕ್ರಮಕ್ಕಾಗಿ ಅಧಿಕಾರಿಗಳು ಪೂರಕವಾಗಿರುವ ಕ್ರಮಗಳಿಗೆ ಮುಂದಾಗಬೇಕೆಂದು ಸೂಚಿಸಿದರು.

ಸಿದ್ಧತೆಗಳ ಬಗ್ಗೆ ಮಾಹಿತಿ: ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿ ದೇವಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಗೂಡೂರು ಭೀಮ ಸೇನ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ ಅವರು ಕಾರ್ಯಕ್ರಮ ಆಯೋಜನೆ ಸಂಬಂಧ ಕೈಗೊಳ್ಳಲಾಗಿರುವ ಸಿದ್ಧತೆಗಳ ಬಗ್ಗೆ ವಿವರ ನೀಡಿದರು.

Advertisement

ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯರಾದ ಪುಷ್ಪಲತಾ, ಭಾಗ್ಯಾ, ಶಂಕರ್‌, ಮುಖಂಡ ಬಸವನಪುರ ರಾಜಶೇಖರ್‌, ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮುತ್ತುರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಲಿಂಗಯ್ಯ, ನಗರಸಭೆ, ಪುರಸಭೆ ಮುಖ್ಯ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇತರೆ
ಇಲಾಖೆಗಳ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next