Advertisement
ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ವತಿಯಿಂದ ನಗರದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿಭಾಗವಾರು ಶೇ. 100 ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪುರಸ್ಕಾರ ಹಾಗೂ ನಿವೃತ್ತ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆಯನ್ನು ಮಾಡಬೇಕು ಎಂದ ಅವರು, ವಿದ್ಯಾರ್ಥಿಗಳು ತಮ್ಮ ಮನೆಯ ಪರಿಸರದ ಜೊತೆಗೆ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಮುನ್ನುಗ್ಗಬೇಕು ಎಂದು ಸಲಹೆ ನೀಡಿದರು.
ಸಂತ ಜೋಸೆಫರ ಪ.ಪೂ. ಕಾಲೇಜು ಪ್ರಾಂಶುಪಾಲರಾದ ಸಿಸ್ಟರ್ ಶೋಭಾ ಮಾತನಾಡಿ, ಜೀವನದಲ್ಲಿ ಪ್ರಯತ್ನದ ಜೊತೆಗೆ ಒಂದು ಗುರಿಯನ್ನು ಹೊಂದಿದಾಗ ಮಾತ್ರ ಸಾಧನೆಯ ಮೆಟ್ಟಿಲೇರಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಭಾ ಕಾರ್ಯಕ್ರಮದ ಅನಂತರ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳನ್ನು ಹಾಗೂ ವಿಭಾಗವಾರು ಶೇ. 100 ರಷ್ಟು ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿರನ್ನು ಸನ್ಮಾನಿಸಿ ಗೌರವಿಸಲಾಯಿತು. ನಿವೃತ ಶಿಕ್ಷಕ ಎಚ್.ಕೆ. ದೇವರಾಜ್ ಅವರನ್ನು ಗೌರವಿಸಲಾಯಿತು.
ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್ ವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಕಾರ್ಯಧ್ಯಕ್ಷ ಟಿ.ಹೇಮಂತ್‌ಕುಮಾರ್, ಪ್ರಧಾನ ಕಾರ್ಯದರ್ಶಿನಾಗರಾಜ್, ಖಜಾಂಚಿ ಹೆಚ್.ಆರ್.ಸರ್ವೋತ್ತಮ್ ವಿರಾಜಪೇಟೆ ಪ್ರಧಾನ ಕಾರ್ಯದರ್ಶಿ ವಿವೇಕ್ ಸೇರಿದಂತೆ ಮೂರು ತಾಲೂಕುಗಳ ಅಧ್ಯಕ್ಷರು, ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಪೈಪೋಟಿ ಶ್ಲಾಘನೀಯಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅಧಿಕ ಅಂಕ ಪಡೆದಿಯುವ ಮೂಲಕ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವುದು ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ಸ್ಪರ್ಧೆ ಗಳು ಹೆಚ್ಚಿದ್ದು, ವಿದ್ಯಾರ್ಥಿಗಳು ಅವುಗಳಿಗೆ ಹೊಂದಿಕೊಂಡು ಬೆಳೆಯಬೇಕಾಗಿದೆ. ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಕರ ಹುದ್ದೆ ಖಾಲಿ ಇದ್ದು, ಸರ್ಕಾರ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಇದೇ ಸಂದರ್ಭ ಕೆಂಚಪ್ಪ ಒತ್ತಾಯಿಸಿದರು.