Advertisement

ಪ್ರವೀಣ್‌ ಹತ್ಯೆ ಪ್ರಕರಣ: ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ, ಸಾಗಾಣಿಕೆ ಬಂದ್‌

03:53 PM Jul 28, 2022 | Team Udayavani |

ಪುತ್ತೂರು: ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ಜಿಲ್ಲೆಯ 4 ತಾಲೂಕುಗಳಲ್ಲಿ ಶುಕ್ರವಾರ ಮಧ್ಯರಾತ್ರಿವರೆಗೆ ಬಂದ್‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ.

Advertisement

ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಬಿಗುವಿನ ವಾತಾವಣ ಉಂಟಾಗಿದ್ದು,  ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ ತಾಲೂಕುಗಳಲ್ಲಿ ಮದ್ಯ ಮಾರಾಟ  ಮತ್ತು ಸಾಗಾಣಿಕೆ  ಶುಕ್ರವಾರ ರಾತ್ರಿ 12 ಗಂಟೆವರೆಗೆ ಬಂದ್‌ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬೆಳ್ಳಾರೆ ನಿವಾಸಿ ಮೊಹ್ಮದ್‌ ಶಫೀಕ್‌ (27) , ಸವಣೂರು ನಿವಾಸಿ ಝಾಕೀರ್‌ (29) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next