Advertisement

ಪ್ರವೀಣ್‌ ನೆಟ್ಟಾರ್‌ ಪತ್ನಿಗೆ ಸಚಿವಾಲಯದಲ್ಲಿ ಉದ್ಯೋಗ ನೀಡಿದ ಸರಕಾರ

09:43 PM Sep 29, 2022 | Team Udayavani |

ಬೆಂಗಳೂರು: ಪಿಎಫ್ಐ ಕಾರ್ಯಕರ್ತರಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ಉದ್ಯೋಗ ಒದಗಿಸಲಾಗಿದೆ.

Advertisement

ಎಂ. ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಗ್ರೂಪ್‌ ಸಿ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗಿದೆ. ಸಿಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಸೆ.29ರಂದು ನೇಮಕಾತಿ ಆದೇಶ ಹೊರಡಿಸಿದೆ.

ಇದನ್ನೂ ಓದಿ : ನೆಹರು, ಇಂದಿರಾ, ಸೋನಿಯಾ ಪ್ರಯತ್ನಿಸಿದ್ರೂ RSS ನ ಒಂದು ಕೂದಲು ಅಲ್ಲಾಡಿಸಲಾಗಿಲ್ಲ: ಈಶ್ವರಪ್ಪ

ಎರಡು ತಿಂಗಳೊಳಗಾಗಿ ಶೈಕ್ಷಣಿಕ ದಾಖಲೆ, ಅಂಕಪಟ್ಟಿಗಳ ನೈಜತೆಯ ಬಗ್ಗೆ ಸಂಬಂಧಪಟ್ಟ ಮಂಡಳಿ ಹಾಗೂ ವಿಶ್ವವಿದ್ಯಾಲಯದ ದೃಢೀಕರಣ ಪ್ರಮಾಣಪತ್ರವನ್ನು ಸಲ್ಲಿಸುವ ಷರತ್ತಿಗೆ ಒಳಪಟ್ಟು ಗುತ್ತಿಗೆ ನೇಮಕಾತಿಯ ಷರತ್ತು ಮತ್ತು ನಿಬಂಧನೆಗಳನ್ವಯ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next