Advertisement

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮತ್ತೆ ಮೂವರ ಬಂಧನ

08:55 AM Nov 05, 2022 | Team Udayavani |

ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಮತ್ತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ.

Advertisement

ಬೆಳ್ಳಾರೆಯಲ್ಲಿ ಶನಿವಾರ ಮುಂಜಾನೆ ದಾಳಿ ಮಾಡಿದ ಅಧಿಕಾರಿಗಳ ತಂಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ರಾಹಿಂ ಶಾ, ಶಾಫಿ ಬೆಳ್ಳಾರೆ, ಹಾಗೂ ಇಕ್ಬಾಲ್ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಫಿ ಬೆಳ್ಳಾರೆ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿದ್ದು, ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ ಹಾಗೂ ಸುಳ್ಯದ ಇಬ್ರಾಹಿಂ ಸೇರಿ ಶನಿವಾರ ಮುಂಜಾನೆ ಮನೆಯಲ್ಲೇ ವಶಕ್ಕೆ ಪಡೆದುಕೊಂಡಿದ್ದಾರೆ.

ಬುಧವಾರ ಮುಂಜಾನೆ ಜಿಲ್ಲೆಯ ಹಲವು ಕಡೆ ಪಿಎಫ್ ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

Advertisement

Udayavani is now on Telegram. Click here to join our channel and stay updated with the latest news.

Next