Advertisement

ಪ್ರವೀಣ್‌ ನೆಟ್ಟಾರು ಹತ್ಯೆ ಖಂಡಿಸಿ ಬಾಳೆಹೊನ್ನೂರು ಸ್ವಯಂ ಪ್ರೇರಿತ ಬಂದ್‌

08:41 AM Jul 29, 2022 | Team Udayavani |

ಚಿಕ್ಕಮಗಳೂರು : ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಖಂಡಿಸಿ ಇಂದು (ಶುಕ್ರವಾರ ಜು.29) ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸ್ವಯಂ ಪ್ರೇರಿತ ಬಂದ್‌ ಮಾಡಲಾಗಿದೆ.

Advertisement

ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಸ್ವಯಂ ಪ್ರೇರಿತ ಬೆಂಬಲ ನೀಡಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್  ಹತ್ಯೆಗೆ ಮಲೆನಾಡಿನಲ್ಲಿ ವ್ಯಾಪಕ  ಆಕ್ರೋಶ ವ್ಯಕ್ತವಾಗಿದೆ.

ಬಾಳೆಹೊನ್ನೂರು ಪಟ್ಟಣ ಬಂದ್ ಗೆ ಕರೆ ನೀಡಿರುವ ಹಿಂದೂಪರ ಸಂಘಟನೆಗಳು, ಪ್ರವೀಣ್ ಹತ್ಯೆ ಖಂಡಿಸಿ, ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಸಂಘಟನೆಗಳು ತೀರ್ಮಾನಿಸಿದ್ದು, ನಿನ್ನೆ ಕೊಪ್ಪ ಸೇರಿದಂತೆ ಜಯಪುರ, ಹರಿಹರಪುರ   ಹೋಬಳಿ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು

Advertisement

Udayavani is now on Telegram. Click here to join our channel and stay updated with the latest news.

Next