Advertisement

Praveen Tej; ಭೂಗತ ಲೋಕದಲ್ಲಿ ‘ಜಿಗರ್‌’

02:47 PM Jun 24, 2024 | Team Udayavani |

ಪ್ರವೀಣ್‌ ತೇಜ್‌ ಈಗ “ಜಿಗರ್‌’ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿರೋದು. ಜುಲೈ 5ರಂದು “ಜಿಗರ್‌’ ತೆರೆಕಾಣಲಿದೆ. ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದ್ದು, ಪಿ.ಆರ್‌.ಓ ಸುಧೀಂದ್ರ ವೆಂಕಟೇಶ್‌ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

Advertisement

ನಾಯಕ ಪ್ರವೀಣ್‌ ತೇಜ್‌ ಮಾತನಾಡಿ, “ಪ್ರೇಮಕಥೆಗಳಿಗೆ ಸೀಮಿತನಾಗಿದ್ದ ನನ್ನನ್ನು ನಿರ್ದೇಶಕರು ಈ ಚಿತ್ರದ ಮೂಲಕ ಆ್ಯಕ್ಷನ್‌ ಹೀರೋ ಮಾಡಿದ್ದಾರೆ. ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಜೀವ. ಉತ್ಸಾಹಿ ಯುವಕನೊಬ್ಬ ಫಿಶ್‌ ಟೆಂಡರ್‌ ಶಿಪ್‌ನಲ್ಲಿ ಭಾಗಿಯಾಗುತ್ತಾನೆ. ಆ ಮೂಲಕ ಭೂಗತಲೋಕಕ್ಕೂ ಕಾಲಿಡುತ್ತಾನೆ. ಅಲ್ಲಿ ಮೂರು ನಾಲ್ಕು ಸಂಘಗಳಿರುತ್ತದೆ. ಸಂಘಗಳ ನಡುವೆ ಸಂಘರ್ಷವೂ ಇರುತ್ತದೆ. ಇದು ಚಿತ್ರದ ಪ್ರಮುಖ ಕಥಾಹಂದರ. ಇದರೊಟ್ಟಿಗೆ ಲವ್‌, ಆ್ಯಕ್ಷನ್‌, ಕಾಮಿಡಿ ಕೂಡ ನಮ್ಮ ಚಿತ್ರದಲ್ಲಿದೆ’ ಎಂದರು.

ಸೂರಿ ಕುಂದರ್‌ “ಜಿಗರ್‌’ ಸಿನಿಮಾದ ನಿರ್ದೇಶಕರು. ಚಿತ್ರದ ಬಗ್ಗೆ ಮಾತನಾಡುವ ಅವರು, “ಸುಮಾರು 15 ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಸ್ವತಂತ್ರ ನಿರ್ದೇಶಕನಾಗಿ ಇದು ನನ್ನ ಮೊದಲ ಚಿತ್ರ. ಜಿಗರ್‌ ಎಂದರೆ ಎರಡು ಗುಂಡಿಗೆವುಳ್ಳವನು ಹಾಗೂ ಯಾವುದಕ್ಕೂ ಅಂಜದವನು ಎಂದು ಅರ್ಥ. ಮಲ್ಪೆ, ಉಡುಪಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಜುಲೈ 5 ರಂದು ಜಿಗರ್‌ ಬಿಡುಗಡೆಯಾಗಲಿದೆ’ ಎಂದರು.

ನಾಯಕಿ ವಿಜಯಶ್ರೀ, ನಟ ಯಶ್‌ ಶೆಟ್ಟಿ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ರಿತ್ವಿಕ್‌ ಮುರಳಿಧರ್‌, ಗೀತರಚನೆಕಾರ ಗಣೇಶ್‌, ಛಾಯಾ ಗ್ರಾಹಕ ಶಿವಸೇನ ಮುಂತಾದವರು ಜಿಗರ್‌ ಚಿತ್ರದ ಕುರಿತು ಮಾತನಾಡಿದರು

Advertisement

Udayavani is now on Telegram. Click here to join our channel and stay updated with the latest news.

Next