Advertisement

ಪ್ರವೀಣ್‌ ಹತ್ಯೆ: ಉದ್ವಿಗ್ನಗೊಂಡಿದ್ದ ಸುಳ್ಯ, ಬೆಳ್ಳಾರೆ ಸಹಜ ಸ್ಥಿತಿಯತ್ತ

11:18 AM Jul 28, 2022 | Team Udayavani |

ಸುಳ್ಯ: ಮಂಗಳವಾರ ರಾತ್ರಿ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಉದ್ವಿಗ್ನಗೊಂಡು ಬಂದ್ ಆಗಿದ್ದ ಸುಳ್ಯ, ಬೆಳ್ಳಾರೆ ಸಹಿತ ತಾಲೂಕಿನಾದ್ಯಂತ ಜನಜೀವನ ಸಹಜ ಸ್ಥಿತಿಗೆ ಮರಳಿದೆ.

Advertisement

ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಜನ ಜೀವನ ಎಂದಿನಂತೆ ಸಹಜ ಸ್ಥಿತಿಗೆ ಮರಳಿದ್ದು, ಬಂದ್‌ ಆಗಿದ್ದ  ಅಂಗಡಿ – ಮುಂಗಟ್ಟುಗಳು ತೆರೆದಿದ್ದು ವ್ಯವಹಾರ ಆರಂಭಗೊಂಡಿದೆ. ವಾಹನ, ಬಸ್, ಜನ ಸಂಚಾರ ಎಂದಿನಂತೆ ಸಂಚರಿಸುತ್ತಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಆಯಾ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಘಟನೆಯಿಂದ ತೀವ್ರ ಆಕ್ರೋಶಗೊಂಡಿದ್ದ ಬೆಳ್ಳಾರೆಯಲ್ಲೂ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪೊಲೀಸರು ನಗರದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸಿದ್ದಾರೆ. ರಾಜ್ಯ ಎಡಿಜಿಪಿ ಅಲೋಕ್ ಕುಮಾರ್ ಸುಳ್ಯದಲ್ಲಿ ಪೊಲೀಸ್ ಅಧಿಕಾರಿಗಳು ಜತೆಗಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಬಿಸಿ ತುಪ್ಪವಾದ ಕರಾವಳಿ ಹಿಂದುತ್ವ: ತನ್ನದೇ ಅಸ್ತ್ರ ತಿರುಮಂತ್ರ ಆಗಿದ್ದು ಹೇಗೆ?

ಮೃತ ಪ್ರವೀಣ್ ನೆಟ್ಟಾರು ಮನೆಗೆ ಹಲವು ನಾಯಕರು ಭೇಟಿ ನೀಡಿ ಕುಟುಂಬಸ್ಥರು ಸಾಂತ್ವನ ಹೇಳುವ ಕಾರ್ಯ ಮಾಡುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next