ಪ್ರಯಾಗ್ ರಾಜ್ : ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ವಿರೋಧಿಸಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಅಟಾಲಾದಲ್ಲಿ ಶುಕ್ರವಾರ ಪ್ರತಿಭಟನೆ ವೇಳೆ ಹಿಂಸಾಚಾರ ಸಂಭವಿಸಿದ್ದು, ಮೊಹಮ್ಮದ್ ಜಾವೇದ್ ಅಲಿಯಾಸ್ ಜಾವೇದ್ ಪಂಪ್ ಎಂಬ ವ್ಯಕ್ತಿ ಹಿಂಸಾಚಾರದ ಹಿಂದಿನ ಪ್ರಮುಖ ಸಂಚುಕೋರ ಎಂದು ಗುರುತಿಸಲಾಗಿದೆ.
ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಮತ್ತು ಎಲ್ಲಾ ಅಕ್ರಮ ಆಸ್ತಿಯನ್ನು ನೆಲಸಮ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಜಾವೇದ್ ನ ಮಗಳು ದೆಹಲಿಯಲ್ಲಿ ವಿದ್ಯಾರ್ಥಿಯಾಗಿದ್ದು, ದೆಹಲಿಯಲ್ಲೂ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ತಿಳಿದು ಬಂದಿದ್ದು, ಅಗತ್ಯವಿದ್ದರೆ ನಾವು ದೆಹಲಿ ಪೊಲೀಸರನ್ನು ಸಂಪರ್ಕಿಸಿ ನಮ್ಮ ತಂಡಗಳನ್ನು ಕಳುಹಿಸುತ್ತೇವೆ ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.
ಇದನ್ನೂ ಓದಿ : ನೂಪುರ್ ಹೇಳಿಕೆ ವಿರೋಧಿಸಿ ಪ್ರತಿಭಟನೆ: ರಾಜ್ಯದೆಲ್ಲೆಡೆ ಖಾಕಿ ಕಣ್ಗಾವಲು
ಜಾವೇದ್ ನ ಮೊಬೈಲ್ ಫೋನ್‌ನಿಂದ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ, ಅಲ್ಲಿ ಭಾರತ್ ಬಂದ್‌ಗೆ ಪ್ರಚಾರ ಮತ್ತು ಹಿಂಸೆಗೆ ಪ್ರಚೋದನೆ ನೀಡಿದ್ದು, ಇದು ಹಿಂಸಾಚಾರದಲ್ಲಿ ಆತನ ಪಾತ್ರವನ್ನು ತೋರಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಖುಲ್ದಾಬಾದ್ ಪೊಲೀಸ್ ಠಾಣೆಯಲ್ಲಿ 29 ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪರಿಚಿತ 70 ಜನ ಮತ್ತು 5000 ಅಪರಿಚಿತರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದ ಒಟ್ಟು 37 ಮಂದಿಯನ್ನು ಬಂಧಿಸಲಾಗಿದೆ.