ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ನವೆಂಬರ್ 27) ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಇದನ್ನೂ ಓದಿ:Visa-Free Entry: ಡಿ.1ರಿಂದ ಈ ದೇಶಕ್ಕೆ ತೆರಳಲು ಭಾರತೀಯರಿಗೆ ವೀಸಾ ಬೇಕಾಗಿಲ್ಲ…
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ತಿರುಪತಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ದೇಶದ 140 ಕೋಟಿ ಭಾರತೀಯರ ಆರೋಗ್ಯ, ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾನುವಾರ ರಾತ್ರಿ ತಿರುಪತಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಂಧ್ರಪ್ರದೇಶ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಹಾಗೂ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದ್ದರು.
ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಟಿಟಿಡಿ ಆಡಳಿತ ಮಂಡಳಿ ಅಧ್ಯಕ್ಷ ಕರುಣಾಕರ್ ರೆಡ್ಡಿ, ಸಂಸದ ಪಿ.ವಿ.ಮಿಥುನ್ ರೆಡ್ಡಿ, ಎಂ.ಗುರುಮೂರ್ತಿ, ರಾಜ್ಯಸಭಾ ಸದಸ್ಯ ನರಸಿಂಹ ರಾವ್ ಹೂಗುಚ್ಛ ನೀಡಿ ಸ್ವಾಗತಿಸಿದ್ದರು.