Advertisement

ಉಭಯ ಸದನಗಳಲ್ಲಿ ಶ್ರದ್ಧಾಂಜಲಿ

06:00 AM Jul 11, 2018 | Team Udayavani |

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವ ಬಿ.ಎ.ಮೊಹಿಯುದ್ದೀನ್‌ ನಿಧನಕ್ಕೆ ವಿಧಾನಮಂಡಲದ ಉಭಯ ಸದನಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿಧಾನಸಭೆಯಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಸಂತಾಪ ಸೂಚನೆ ನಿರ್ಣಯ ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ಮೌಲ್ಯಾಧಾರಿತ ರಾಜಕಾರಣಿ ಮೊಹಿಯುದ್ದೀನ್‌ ಅವರ ನಿಧನದಿಂದ ರಾಜಕಾರಣದ ಹಿರಿಯ ಕೊಂಡಿ ಕಳೆದುಕೊಂಡಂತಾಗಿದೆ ಎಂದರು. ಸ್ಪೀಕರ್‌ ರಮೇಶ್‌ಕುಮಾರ್‌ ಅವರು ಮೊಹಿಯುದ್ದೀನ್‌ ಅವರ ಬಗ್ಗೆ ಮಾತನಾಡುತ್ತಾ ಭಾವುಕರಾದರು. 

Advertisement

ಪರಿಷತ್‌ನಲ್ಲೂ ಸಂತಾಪ: ವಿಧಾನ ಪರಿಷತ್‌ನಲ್ಲಿ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಸಂತಾಪ ಸೂಚನೆ ಪ್ರಸ್ತಾಪಿಸಿದರು. ಉಪ ಮುಖ್ಯಮಂತ್ರಿ ಪರಮೇಶ್ವರ್‌, ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸಪೂಜಾರಿ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next