Advertisement

ಬಜೆಟ್‌ ಪೂರ್ವಭಾವಿ ಸಭೆ

11:17 PM Feb 11, 2020 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಾರ್ಚ್‌ 5ರಂದು ಮಂಡಿಸಲಿರುವ ಬಜೆಟ್‌ಗೆ ಸಂಬಂಧಿಸಿದಂತೆ ವಿವಿಧ ಇಲಾಖೆ ಹಾಗೂನಿಗಮ ಮಂಡಳಿ ಗಳೊಂ ದಿಗೆ ಪೂರ್ವಭಾವಿ ಚರ್ಚೆ ಮುಂದುವರಿಸಿದ್ದಾರೆ.ಮಂಗಳವಾರ ವಿಧಾನಸೌಧದಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

Advertisement

ಸಭೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಬಿ.ಕೆ.ರವಿ, ಬಿಜೆಪಿ ಮುಖಂಡ ಡಿ.ಎಸ್‌.ವೀರಯ್ಯ ಸೇರಿ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು. ಬಜೆಟ್‌ನಲ್ಲಿ ತಮ್ಮ ಸಮುದಾಯದ ಅಭಿವೃದ್ಧಿ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನದ ಘೋಷಿಸುವಂತೆ ಮನವಿ ಸಲ್ಲಿಸಿದರು.ಇದಾದ ನಂತರ ಅಲ್ಪಸಂಖ್ಯಾತರ ಸಮುದಾಯಗಳ ಸಂಸದರು ಮತ್ತು ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು.

ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಬೇಕೀ ರುವ ಆದ್ಯತೆ ಬಗ್ಗೆ ಚರ್ಚೆ ನಡೆಸಿದರು. ಮಾಜಿ ಸಚಿವರಾದ ಯು.ಟಿ.ಖಾದರ್‌, ತನ್ವೀರ್‌ಸೇಠ್, ಶಾಸಕ ಎನ್‌.ಎ. ಹ್ಯಾರೀಸ್‌, ಐಎಎಸ್‌ ಅಧಿಕಾರಿ ಮೊಹಮ್ಮದ್‌ಮೊಹಿಸಿನ್‌, ಅಲ್ಪಸಂಖ್ಯಾತರ ಒಕ್ಕೂಟದ ಪದಾಧಿಕಾರಿಗಳು, ವಕ್ಫ್ ಬೋರ್ಡ್‌, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಪದಾಧಿಕಾರಿಗಳು ಉಪಸ್ಥಿತರಿದ್ದರು.ನಂತರ ಪ್ರವಾಸೋ ದ್ಯಮ ಇಲಾಖೆಗೆ ಸಂಬಂಧಿಸಿದಂತೆ ಸುದೀರ್ಘ‌ ಚರ್ಚೆ ನಡೆಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಿಂದ ರೂಪಿಸಿರುವ ಕಾರ್ಯಪಡೆಯ ಅಧ್ಯಕ್ಷರಾದ ಸುಧಾ ಮೂರ್ತಿ ಸಭೆಯಲ್ಲಿ ಭಾಗವಹಿಸಿದ್ದರು. ಸಾಹಿತಿಗಳು ಮತ್ತು ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೂ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ, ಜಾನಪದ ಅಕಾಡೆಮಿ ಅಧ್ಯಕ್ಷೆ ಜೋಗತಿ ಮಂಜಮ್ಮ, ನಿರ್ದೇಶಕ ಪಿ.ಶೇಷಾದ್ರಿ ಸಹಿತವಾಗಿ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next