Advertisement
ಫಲಿತಾಂಶಕ್ಕೂ ಮುನ್ನ ಕಲಬುರಗಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ ಬರಬಹುದು ಎಂದು ಹೇಳಿದ್ದರು. ಈಗ ಪಂಚರಾಜ್ಯ ಫಲಿತಾಂಶದ ಬಳಿಕ ಅವಧಿಪೂರ್ವ ಚುನಾವಣೆ ವಿಚಾರ ಚರ್ಚೆಯಲ್ಲಿದೆ. ಗುಜರಾತ್ ಜತೆಗೆ ಇಲ್ಲೂ ಚುನಾವಣೆ ನಡೆಸುವ ಬಗ್ಗೆ ಎಪ್ರಿಲ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಹಿತ ರಾಜ್ಯದ ಬಿಜೆಪಿ ನಾಯಕರನ್ನು ದಿಲ್ಲಿಗೆ ಕರೆಸಿಕೊಂಡು ಚರ್ಚಿಸುವ ಸಾಧ್ಯತೆಯಿದೆ.
ಈ ಮಧ್ಯೆ, ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಬೇರೆ ರಾಜ್ಯಗಳಿಗೂ ಕರ್ನಾ ಟಕದ ರಾಜಕಾರಣಕ್ಕೆ ವ್ಯತ್ಯಾಸವಿದೆ ಎಂದು ಸ್ವತಃ ಯಡಿಯೂರಪ್ಪನವರು ಹೇಳಿದ್ದಾರೆ. ಅವರೇ ಆಯ್ಕೆ ಮಾಡಿದ ಬೊಮ್ಮಾಯಿ ಅಧಿಕಾರ ನಡೆಸುತ್ತಿದ್ದಾರೆ. ಹೀಗಿರುವಾಗ ಅವಧಿಗೆ ಮೊದಲೇ ಚುನಾವಣೆ ಯಾಕಾಗಬೇಕು ಎಂದು ಪ್ರಶ್ನಿಸಿದ್ದಾರೆ. ಜತೆಗೆ ಅವಧಿಪೂರ್ವ ಚುನಾವಣೆ ಅಷ್ಟು ಸುಲಭವಲ್ಲ ಎಂದೂ ಹೇಳಿದ್ದಾರೆ. ಇದನ್ನೂ ಓದಿ:ಹೈಕಮಾಂಡ್ ಬುಲಾವ್; ಡಿ.ಕೆ.ಶಿವಕುಮಾರ್ ದಿಲ್ಲಿಗೆ
Related Articles
ಕಲಬುರಗಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ವಿಧಾನಸಭೆಗೆ ಯಾವಾಗ ಚುನಾವಣೆ ನಡೆದರೂ ನಾವು ಸಿದ್ಧ ಎಂದು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಚುನಾವಣೆ ಮಾಡದೇ ಇರುವವರು, ವಿಧಾನಸಭೆ ಚುನಾವಣೆ ಮಾಡುತ್ತಾರಾ? ತಮಗೇನೂ ಹಾಗೆ ಅನಿಸುವುದಿಲ್ಲ. ಇರುವ ಮಾಹಿತಿ ಪ್ರಕಾರ ಬಿಜೆಪಿ ಅವ ಧಿಗೂ ಮುನ್ನವೇ ಚುನಾವಣೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ನಾಳೆಯೇ ಚುನಾವಣೆ ಘೋಷಿಸಿದರೂ ನಾವು ಸಜ್ಜಾಗಿದ್ದೇವೆ ಎಂದಿದ್ದಾರೆ.
Advertisement