Advertisement
ನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಂವಿಧಾನ ಪೀಠಿಕೆ ಯನ್ನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದರು.
Related Articles
Advertisement
ಸಂವಿಧಾನದ ಮೇಲೆ ಗೌರವವಿರಲಿ: ಸಂವಿಧಾನದ ಪರಿಕಲ್ಪನೆ ಇಲ್ಲದೆ ಇದ್ದಿದ್ದರೆ ನಮ್ಮ ಸಮಾಜದ ಸ್ಥಿತಿ ಈಗಿರುತ್ತಿರಲಿಲ್ಲ. ಬಡವರು ಹಾಗೂ ಶ್ರಮಿಕರು ಬಂಡವಾಳ ಶಾಹಿಗಳ ಹತ್ತಿರ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಇಂದು ನಾವೆಲ್ಲ ನಮಗೆ ಹಕ್ಕಿದೆ ನಮಗೂ ಅವಕಾಶ ಕೊಡಿ ಎಂದು ಕೇಳುವುದಕ್ಕೂ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವೇ ಕಾರಣ. ಹಾಗಾಗಿ ಸಂವಿಧಾನದ ಮೇಲೆ ಎಲ್ಲರಿಗೂ ಗೌರವವಿರಲಿ ಎಂದರು. ಶಾಲಾ ಹಾಗೂ ಕಾಲೇಜುಗಳಿಂದ ಇಂದಿನಿಂದ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯವಾಗಿದ್ದು, ಎಲ್ಲ ಶಾಲಾ-ಕಾಲೇಜುಗಳಲ್ಲಿ ಬೆಳಗ್ಗಿನ ಪ್ರಾರ್ಥನೆಯ ನಂತರ ಸಂವಿಧಾನದ ಪೀಠಿಕೆ ಓದಬೇಕು. ಸಂವಿಧಾನ ವಿರುದ್ಧವಾಗಿ ಮಾತನಾಡುವುದು ಹಾಗೂ ಅದರ ವಿರುದ್ಧ ನಡೆದುಕೊಳ್ಳುವುದನ್ನು ಸರ್ಕಾರ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಸಂವಿಧಾನ ವಿರೋಧಿ ಚಟುವಟಿಕೆ ನಡೆಸುವವರು ದೇಶ ಹಾಗೂ ರಾಜ್ಯಕ್ಕೆ ಮಾರಕ ಎಂದು ತಿಳಿಸಿದರು.
ಶಾಸಕರಾದ ಪಿ.ರವಿಕುಮಾರ್‌ಗೌಡ ಗಣಿಗ, ದಿನೇಶ್‌ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಮಂಡ್ಯ ವಿವಿ ಕುಲಪತಿ ಡಾ.ಪುಟ್ಟರಾಜು, ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾ ಧಿಕಾರಿ ಡಾ.ಎಚ್.ಎಲ್.ನಾಗರಾಜು, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಜಿಲ್ಲಾ ಸಮಾಜ ಕಲ್ಯಾಣಾ ಧಿಕಾರಿ ಸಿದ್ದಲಿಂಗೇಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿ ಕಾರಿ ಶ್ರೀನಿವಾಸ್ ಇತರರು ಇದ್ದರು.
ಒಟ್ಟು ಐದು ಸಾವಿರ ವಿದ್ಯಾರ್ಥಿಗಳು ಭಾಗಿ: ನಗರದ ಮಂಡ್ಯ ವಿಶ್ವ ವಿದ್ಯಾಲಯದ ಆವರಣದಲ್ಲಿ ಐದು ಸಾವಿರ ವಿದ್ಯಾರ್ಥಿ ಗಳೊಂದಿಗೆ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಲಾಯಿತು. ಮಕ್ಕಳು ಬೆಳಗ್ಗೆಯಿಂದಲೇ ಸಂವಿಧಾನ ಪೀಠಿಕೆ ಓದಲು ನಿಗದಿಪಡಿಸಿದ್ದ ಸ್ಥಳದಲ್ಲಿ ಹಾಜರಿದ್ದರು.
ಭಾಗವಹಿಸಿದ ಎಲ್ಲ ಮಕ್ಕಳಿಗೂ ಸಂವಿಧಾನ ಪೀಠಿಕೆಯ ಒಂದು ಪ್ರತಿಯನ್ನು ನೀಡಲಾ ಯಿತು. ಜಿಲ್ಲಾದ್ಯಂತ 7 ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದರು. ಜಿಲ್ಲಾದ್ಯಂತ ಶುಕ್ರವಾರ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಓದಲಾಯಿತು.