Advertisement

ಕೊರೊನಾ ಹರಡದಂತೆ ಮುನ್ನೆಚ್ಚರಿಕೆ

10:51 PM Mar 09, 2020 | Lakshmi GovindaRaj |

ವಿಧಾನಸಭೆ: ಕೊರೊನಾ ಸೋಂಕು ಹರಡದಂತೆ ತಡೆ ಯಲು ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಲಾ ಗಿದೆ. ಈ ಕಾರ್ಯಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಅನುದಾನದ ಕೊರತೆ ಇಲ್ಲ ಎಂದು ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸದನಕ್ಕೆ ತಿಳಿಸಿದರು.

Advertisement

ಸೋಮವಾರ ಶೂನ್ಯವೇಳೆಯಲ್ಲಿ ಸರ್ಕಾರದ ಪರ ಉತ್ತರ ನೀಡಿ, ವಿಶ್ವ ಆರೋಗ್ಯ ಸಂಸ್ಥೆಯು ಇದನ್ನು ಸಾರ್ವಜನಿಕ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ. ಅದರಂತೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ವ್ಯಾಪಕ ಪ್ರಚಾರ ಕಾರ್ಯವನ್ನೂ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಸೋಂಕು ಶಂಕಿತರ ಮೇಲೆ 28 ದಿನಗಳ ನಿಗಾ ವಹಿಸಲಾಗುತ್ತಿದೆ ಎಂದು ಹೇಳಿದರು.

ಕಳೆದ ಜ.20ರಿಂದಲೇ ಬಹಳ ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಹಾಗೂ ಮಂಗಳೂರು ಅಂ.ರಾ.ವಿಮಾನ ನಿಲ್ದಾಣಗಳಲ್ಲಿ ಈವರಗೆ 87,000 ಮಂದಿ ವಿದೇಶಿಗರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಹಿಂದೆ ಕಾಣಿಸಿಕೊಂಡಿದ್ದ ಸಾರ್ಸ್‌ ಸೋಂಕಿಗೆ ಮರಣ ಪ್ರಮಾಣ ಶೇ. 3- ಶೇ.4ರಷ್ಟಿತ್ತು. ಕೊರೊನಾ ಸೋಂಕಿನ ಮರಣ ಪ್ರಮಾಣ ಶೇ. 3ರಿಂದ ಶೇ. 6ರಷ್ಟಿದೆ ಎಂದು ವಿವರ ನೀಡಿದರು.

ಮಾಸ್ಕ್ ಧರಿಸುವ ಅಗತ್ಯವಿಲ್ಲ: ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ. ತೀವ್ರ ಜ್ವರ, ಕೆಮ್ಮು, ನೆಗಡಿ ಸೋಂಕು ತಗುಲಿದ ಪ್ರಮುಖ ಲಕ್ಷಣವೆನಿಸಿದೆ. ಈ ಲಕ್ಷಣವಿರುವವರು ಮಾಸ್ಕ್ ಧರಿಸಬೇಕು. ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ “ಎನ್‌- 95′ ಗುಣಮಟ್ಟದ ಮಾಸ್ಕ್ ಧರಿಸಬೇಕಿದ್ದು, ಮುಂದಿನ ಆರು ತಿಂಗಳಿಗೆ ಸಾಕಾಗುವಷ್ಟು ಮಾಸ್ಕ್ಗಳನ್ನು ಸಂಗ್ರಹಿಸಿಡಲಾ ಗಿದೆ ಎಂದು ಸದನಕ್ಕೆ ತಿಳಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಎಲ್ಲ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಿ ದ್ದಾರೆ. ನಿಮ್ಹಾನ್ಸ್‌, ವಿಕ್ಟೋರಿಯಾ ಆಸ್ಪತ್ರೆ, ರಾಜೀವ್‌ಗಾಂಧಿ ಎದೆ ರೋಗಗಳ ಸಂಸ್ಥೆಗಳಲ್ಲಿ ಪರೀಕ್ಷಾ ಪ್ರಯೋಗಾಲಯ ಸಿದ್ಧಪಡಿಸಲಾಗಿದೆ.

Advertisement

ಮುಂದಿನ 15 ದಿನದಲ್ಲಿ ಹಾಸನ, ಮೈಸೂರು, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ ಭಾಗದಲ್ಲೂ ಪರೀಕ್ಷಾ ಪ್ರಯೋಗಾಲಯ ಸಿದ್ಧಪಡಿಸಲಾಗು ವುದು. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ 3000 ಹಾಸಿಗೆ ಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸಲಾಗಿದೆ. ದೇವನಹಳ್ಳಿಯ ಆಕಾಶ್‌ ವೈದ್ಯಕೀಯ ಕಾಲೇಜಿನಲ್ಲಿ 100 ಹಾಸಿಗೆಗಳನ್ನು ಮೀಸಲಿಡಲಾಗಿದೆ ಎಂದು ವಿವರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next