Advertisement
ಕೋಲ್ಕತಾದ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ವೈದ್ಯಕೀಯ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಅವರ ಸುರಕ್ಷೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರಕಾರ ಬದ್ಧವಾಗಿದೆ ಎಂದರು.
ಒಂದೆಡೆ ರಾಜ್ಯ ಸರಕಾರ ರಾಜಭವನದ ಜತೆಗೆ ಸಂಘರ್ಷ ನಡೆಸುತ್ತಿರುವಾಗಲೇ ವೈದ್ಯ ಸಿಬಂದಿ ಭದ್ರತೆಗಾಗಿ ಸರಕಾರ ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಜಾರಿಗೆ ತಂದಿದ್ದ ಕರ್ನಾಟಕ ವೈದಕೀಯ ನೋಂದಣಿ ಮತ್ತು ಇತರ ತಿದ್ದುಪಡಿ ಕಾಯಿದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇದರ ಪ್ರಕಾರ ವೈದ್ಯರು ಹಾಗೂ ಸಿಬಂದಿ ಮೇಲೆ ಹಲ್ಲೆ ಮಾಡುವವರಿಗೆ 3 ವರ್ಷಕ್ಕೂ ಮೇಲ್ಪಟ್ಟು ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.