Advertisement

Mangaluru: ಜಿಲ್ಲಾಡಳಿತದಿಂದ ಮುಂಜಾಗ್ರತ ಕ್ರಮ: ಡಿಸಿ

01:22 AM Dec 04, 2024 | Team Udayavani |

ಮಂಗಳೂರು: ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜಿಲ್ಲೆಯ ಕೆಲವೊಂದು ಕಡೆಗಳಲ್ಲಿ ಹಾನಿ ಉಂಟಾಗಿದ್ದು, ಮನೆಗೆ ನೀರು ನುಗ್ಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ

Advertisement

ಎಸ್‌ಡಿಆರ್‌ಎಫ್‌ ತಂಡದಿಂದಲೂ ಕಾರ್ಯಾಚರಣೆ ನಡೆಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆ ನಡೆಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮಳೆ ನಿಂತ ಬಳಿಕವೂ ಸಾರ್ವಜನಿಕರು ನದಿ, ನೀರು ನಿಂತ ಪ್ರದೇಶಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಪ್ರವಾಸಿಗರು ನೀರಿಗೆ ಇಳಿಯದಂತೆ ರೆಸಾರ್ಟ್‌ ಮಾಲಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next