Advertisement

ಮುಂಜಾಗ್ರತಾ ಕ್ರಮ ಪರಿಶೀಲನೆ

05:26 PM Apr 11, 2020 | Suhan S |

ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ  ಕೋವಿಡ್ 19 ವೈರಾಣು ತಡೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

Advertisement

ಗುಂಡ್ಲುಪೇಟೆ ತಾಲೂಕಿನ ಗಡಿ ಭಾಗದ ಮೂಲೆಹೊಳೆ ಚೆಕ್‌ ಪೋಸ್ಟ್‌, ಕೆಕ್ಕನಹಳ್ಳ ಹಾಗೂ ಮೇಲುಕಾಮನಹಳ್ಳಿ ಚೆಕ್‌ ಪೋಸ್ಟ್‌ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅಗತ್ಯ ವಸ್ತುಗಳ ಸಾಗಣೆ ವಾಹನಗಳಿಗೆ ಮಾಡುತ್ತಿರುವ ಸ್ಯಾನಿಟೈಸೇಷನ್‌ ಸೇರಿದಂತೆ ಇತರೆ ಮಾಹಿತಿ ಪಡೆದುಕೊಂಡರು.

ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಬಾಲಚಂದ್ರ ಕೂಡ ಈ ಸಂದರ್ಭದಲ್ಲಿ ಅರಣ್ಯ ವ್ಯಾಪ್ತಿ ಪ್ರದೇಶದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರ ನೀಡಿದರು.

ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ, ಪುರಸಭಾ ಕಚೇರಿಗೆ ಭೇಟಿ ನೀಡಿ ಪೌರ ಕಾರ್ಮಿಕರಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಪರಿಶೀಲಿಸಿ, ಇಂದಿರಾ ಕ್ಯಾಂಟೀನಲ್ಲಿ ಪೂರೈಸುತ್ತಿರುವ ಉಪಾಹಾರ, ಊಟ ಹಾಗೂ ಸೇವೆ ಕಾರ್ಯವನ್ನು ಪರಿಶೀಲಿಸಿದರು. ನಿರಾಶ್ರಿತರ ಕೇಂದ್ರಕ್ಕೂ ಭೇಟಿ ಕೊಟ್ಟು ಕಲ್ಪಿಸಿರುವ ಸೌಲಭ್ಯ ವೀಕ್ಷಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next