Advertisement
ಮಂಗಳೂರು ವಿಮಾನ ನಿಲ್ದಾಣಕ್ಕೆ ಹಾಗೂ ನವಮಂಗಳೂರು ಬಂದರಿಗೆ ಆಗಮಿಸುವ ಮತ್ತು ಇಲ್ಲಿಂದ ತೆರಳುವವರ ತಪಾಸಣ ಕಾರ್ಯ ಮುಂದುವರಿಯುತ್ತಿದ್ದು, ಈವರೆಗೆ 20 ಸಾವಿರ ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲಾ ವೆನಾÉಕ್ ಆಸ್ಪತ್ರೆಯಲ್ಲಿ 19 ಬೆಡ್ ಸಾಮರ್ಥ್ಯದ ಐಸೋಲೇಟೆಡ್ ವಾರ್ಡ್. ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲೂ ಪ್ರತ್ಯೇಕ ವಾರ್ಡ್ ಮಾಡಲಾಗಿದೆ. ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು, ಪ್ರಕರಣ ಕಂಡು ಬಂದಲ್ಲಿ ಇದನ್ನು ಬಳಸಲಾಗುತ್ತದೆ. ಆರೋಗ್ಯ ಸಿಬಂದಿ ಈಗಾಗಲೇ ಈ ವಾರ್ಡ್‌ನಲ್ಲಿ ಲಭ್ಯವಿದ್ದಾರೆ.
ಮಾಡಲಾಗುತ್ತಿದೆ ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್ ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ನೆರೆಯ ಕೇರಳ, ಬೆಂಗಳೂರು ಮೂಲದ ವ್ಯಕ್ತಿಗಳಲ್ಲಿ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೊರೊನಾ ಪೀಡಿತ ದೇಶದಿಂದ ಹಾಗೂ ಇತರ ಭಾಗದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತು ನವ ಮಂಗಳೂರು ಬಂದರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಎಲ್ಲ ಪ್ರಯಾಣಿಕರನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಜನ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ; ಎಚ್ಚರಿಕೆ ವಹಿಸಬೇಕು.
-ಸಿಂಧೂ ಬಿ. ರೂಪೇಶ್, ದ.ಕ. ಜಿಲ್ಲಾಧಿಕಾರಿ
Related Articles
-ಸುಧೀರ್‌ಚಂದ್ರ ಸೂಡ, ಜಿಲ್ಲಾ ಆರೋಗ್ಯಾಧಿಕಾರಿಗಳು, ಉಡುಪಿ
Advertisement