Advertisement
ಪ್ರತಿಕೂಲ ಹವಾಮಾನದ ಸಮಯದಲ್ಲಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗಬಾರದು. ಗುಡುಗು- ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಾದ ಮನೆಗಳು, ಕಚೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ ಆಶ್ರಯ ಪಡೆಯಬೇಕು. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿಕೊಂಡು ಆಶ್ರಯ ಪಡೆಯಬೇಕು ಎಂದು ತಿಳಿಸಲಾಗಿದೆ.
ಸಿಡಿಲು/ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112/108 ಸಹಾಯವಾಣಿಗೆ ಕರೆ ಮಾಡಬೇಕು. ವೈದ್ಯಕೀಯ ಸಿಬಂದಿ ಆಗಮಿಸುವ ಮುನ್ನವೇ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು/ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಜೀವವನ್ನು ಉಳಿಸಬಹುದಾಗಿದೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು ಸಂಚಾರವಾಗುವುದಿಲ್ಲ. ಆದ್ದರಿಂದ, ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು. ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ ತತ್‌ಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.
Related Articles
Advertisement
ಮರಗಳ ಕೆಳಗೆ ಆಶ್ರಯ ಪಡೆಯದಿರಿಮಿಂಚನ್ನು ಆಕರ್ಷಿಸುವಂತಹ ವಿದ್ಯುತ್ ಅಥವಾ ಟೆಲಿಫೂನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು.
-ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು
-ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕ್‌ಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು
-ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಬಾರದು ಹಾಗೂ ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.
-ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು
-ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು
-ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು.
-ಗುಡುಗು ಸಿಡಿಲಿನ ಸಮಯದಲ್ಲಿ ಮೋಟಾರ್ ಸೈಕಲ್ ಅಥವಾ ಇನ್ನಿತರ ಯಾವುದೇ
-ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು
-ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು -ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು.
-ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಿನ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರಬೇಕು. ವಿದ್ಯುತ್ ಸಂಪರ್ಕ ಹೊಂದಿರುವಂತಹ ವಿದ್ಯುತ್/ಎಲೆಕ್ಟ್ರಿಕಲ್ ಉಪಕರಣಗಳಾದ ಕಂಪ್ಯೂಟರ್, ಲ್ಯಾಪ್‌ಟಾಪ್, ವೀಡಿಯೋ ಗೇಮ್ ಸಾಧನಗಳು, ಮೊಬೈಲ್ ಫೋನ್, ವಾಷಿಂಗ್ ಮೆಷಿನ್, ಸ್ಟವ್ ಹಾಗೂ ಇತರ ವಿದ್ಯುತ್ ಉಪಕರಣಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು.